w
Headlines
Home » Thirthahalli | ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ

Thirthahalli | ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ

Thirthahalli |  ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ


ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆಯ ಕೆರೆ ದಂಡೆಯ ಮೇಲೆ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ‌.

ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ತ್ಯಾರಂದೂರು ಆದಿತ್ಯ (23), ಕುರುವಳ್ಳಿಯ ಬಿ ಅಗ್ರಹಾರದ ಅಭಿಷೇಕ್ (21) ಮತ್ತು ಆರಗದ ಅಮೀರ್ ಕೆ. (20) ಬಂಧಿತ ಆರೋಪಿಗಳು‌.

ಎಸ್‌ಪಿ ಮಿಥುನ್ ಕುಮಾರ್ ಜಿ. ಕೆ., ಎಎಸ್‌ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, 5,200 ರೂ. ಮೌಲ್ಯದ 190 ಗ್ರಾಂ ತೂಕದ ಒಣ ಗಾಂಜಾ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಎರಡು ಬೈಕ್‌ಗಳನ್ನು ಅಮಾನತುಪಡಿಸಿಕೊಂಡು ಈ ಮೂವರು ಆರೋಪಿಗಳ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.