w
Headlines
Home » Thirthahalli | ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ

Thirthahalli | ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ

ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ


ತೀರ್ಥಹಳ್ಳಿಯಲ್ಲಿರುವ ರಾಷ್ಟ್ರ ಕವಿ ಕುವೆಂಪು(kuvempu) ಅವರು ಓದಿದ ಶಾಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದರು.

ತೀರ್ಥಹಳ್ಳಿ(Thirthahalli) ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೂ ಮುನ್ನ ಶಾಲೆಗೆ ಭೇಟಿ ನೀಡಿದರು.

ಶಾಲೆಗೆ ಭೇಟಿ ನೀಡುತ್ತಿದ್ದಂತೆ ಶಾಲಾ ಮಕ್ಕಳು ಸಚಿವ ಮಧುಬಂಗಾರಪ್ಪರನ್ನು ಗುಲಾಬಿ ಹೂವು ನೀಡುವುದರ ಮೂಲಕ ಸ್ವಾಗತಿಸಿದರು. ಶಾಲಾ ಎಸ್.ಡಿ.ಎಂ.ಸಿ ಸದಸ್ಯರೊಂದಿಗೆ ಶಾಲೆಗೆ ಆಗಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿದರು. ಶಾಲೆಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಮುಡುಬ ರಾಘವೇಂದ್ರ ಸೇರಿದಂತೆ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.