POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!


ಶಿವಮೊಗ್ಗ : ನಗರದ ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ.

ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎನ್ನಲಾಗಿದೆ.

ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿತ್ತು. ಈ ವಿಚಾರ ಮೇಲಿನ ಅಧಿಕಾರಿಗಳಿಗೂ ತಿಳಿದಿದೆ. ಮೇಲಿನ ಅಧಿಕಾರಿಗಳ ಬೆಂಬಲದೊಂದಿಗೆ ಕೆ. ರೇಣುಕಾ ಅವರು ಬಸವರಾಜು ಟಿ.ವಿ ಮತ್ತು ಮತ್ತೋರ್ವ ಚಾಲಕ ಸಿ. ಮಹೇಶ್ವರ ವಿರುದ್ಧ ಹೊನ್ನಾಳಿ ಪೋಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನೆ ದೂರು ನೀಡಿದ್ದು, ಎಫ್​ಐಆರ್ ದಾಖಲಾಗಿದೆ.

ಎಫ್​ಐಆರ್​​ ದಾಖಲಾಗುತ್ತಿದ್ದಂತೆ ಬಸವರಾಜು ಟಿ.ವಿ ​ಶಿವಮೊಗ್ಗ ವಿಭಾಗೀಯ ಅಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಆದರೆ ಶಿವಮೊಗ್ಗ ವಿಭಾಗದ ಅಧಿಕಾರಿಗಳು ಚಾಲಕ ಬಸವರಾಜು ಅವರಿಗೆ ಸ್ಪಂದಿಸಿಲ್ಲ. ಇದರಿಂದ ನೊಂದ ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆ ಯತ್ನಿಸಿದ್ದಾರೆ. ವಿಚಾರ ತಿಳಿದು ಅಕ್ಕ-ಪಕ್ಕದಲ್ಲಿದ್ದ ಸಿಬ್ಬಂದಿ ಅವರನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.