ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!
ಶಿವಮೊಗ್ಗ : ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ.
ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎನ್ನಲಾಗಿದೆ.
ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿತ್ತು. ಈ ವಿಚಾರ ಮೇಲಿನ ಅಧಿಕಾರಿಗಳಿಗೂ ತಿಳಿದಿದೆ. ಮೇಲಿನ ಅಧಿಕಾರಿಗಳ ಬೆಂಬಲದೊಂದಿಗೆ ಕೆ. ರೇಣುಕಾ ಅವರು ಬಸವರಾಜು ಟಿ.ವಿ ಮತ್ತು ಮತ್ತೋರ್ವ ಚಾಲಕ ಸಿ. ಮಹೇಶ್ವರ ವಿರುದ್ಧ ಹೊನ್ನಾಳಿ ಪೋಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಎಫ್ಐಆರ್ ದಾಖಲಾಗುತ್ತಿದ್ದಂತೆ ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗೀಯ ಅಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಆದರೆ ಶಿವಮೊಗ್ಗ ವಿಭಾಗದ ಅಧಿಕಾರಿಗಳು ಚಾಲಕ ಬಸವರಾಜು ಅವರಿಗೆ ಸ್ಪಂದಿಸಿಲ್ಲ. ಇದರಿಂದ ನೊಂದ ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆ ಯತ್ನಿಸಿದ್ದಾರೆ. ವಿಚಾರ ತಿಳಿದು ಅಕ್ಕ-ಪಕ್ಕದಲ್ಲಿದ್ದ ಸಿಬ್ಬಂದಿ ಅವರನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್