ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ | Bore well price hike issue

ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ


ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‍ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ಕೊಳವೆಬಾವಿ ವಾಹನ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರದ ಇಲಾಖೆಗಳ ವಿವಿಧ ಯೋಜನೆಗಳಡಿ ಹಾಗೂ ಖಾಸಗಿ ರೈತರ ಜಮೀನುಗಳಲ್ಲಿ ಕೊಳವೆ ಬಾವಿಗಳ ಕೊರೆಯುವ ಕುರಿತು ಜಿಲ್ಲೆಯ ರಿಗ್ ವಾಹನ ಮಾಲೀಕರು ಹಾಗೂ ಏಜೆನ್ಸಿಯವರೊಂದಿಗೆ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಬರಗಾಲ ಇರುವುದರಿಂದ ರೈತರಿಗೆ ಮಾನವೀಯತೆ ದೃಷಿಯಿಂದ ಅನುಮೋದಿತ ದರ ಪಟ್ಟಿಗಳನ್ವಯ ಕೊಳವೆ ಬಾವಿಗಳನ್ನು ಕೊರೆಯಬೇಕು. ರೈತರಿಂದ ಹೆಚ್ಚಿನ ದರ ಪಡೆದಿರುವ ಕುರಿತು ಹಲವು ದೂರುಗಳು ಬಂದಿದ್ದು, ಪುನಃ ಹೆಚ್ಚಿನ ದರಗಳನ್ನು ರೈತರಿಂದ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ರಿಗ್ ಮಾಲೀಕರು/ಏಜೆನ್ಸಿಗಳ ವಿರುದ್ಧ ನಿರ್ದಾಕ್ಷಣ್ಯವಾಗಿ ಕ್ರಮ ವಹಿಸಲಾಗುವುದು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ನಿಯಮಾನುಸಾರ ರಿಗ್ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುದು ಎಂದರು.

ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಲು ಮಧ್ಯವರ್ತಿಗಳ ಸಲಹೆ ಪಡೆಯದೇ ಹಾಗೂ ಮಧ್ಯವರ್ತಿಗಳ ಮುಖಾಂತರ ವ್ಯವಹರಿಸದೇ, ನೇರವಾಗಿ ರಿಗ್ ಮಾಲೀಕರ ಜೊತೆ ವ್ಯವಹರಿಸಿದಲ್ಲಿ ಅನುಮೋದಿತ ಬೆಲೆಯನ್ವಯ ತಮ್ಮ ಕೆಲಸವನ್ನು ಮಾಡಿಕೊಳ್ಳಬಹುದು ಎಂದರು.

ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ತೀವ್ರತೆಯನ್ನು ಅರಿತುಕೊಂಡು ಕುಡಿಯುವ ನೀರು ಹಾಗೂ ರೈತರ ಜಮೀನಿನಲ್ಲಿ ಕೊಳವೆ ಬಾವಿ ಅಳವಡಿಸುವ ಬಗ್ಗೆ ಹೆಚ್ಚಿನ ಜವಾಬ್ದಾರಿ ಹಾಗೂ ಮಾನವೀಯತೆಯಿಂದ ಹಾಗೂ ಇಲಾಖಾ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಕೊಳವೆಬಾವಿ ಮಾಲೀಕರು/ಏಜೆನ್ಸಿನಗಳು ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ತಾಲ್ಲೂಕು ಮಟ್ಟದಲ್ಲಿ ಬರಪರಿಸ್ಥಿತಿಯನ್ನು ನಿರ್ವಹಿಸಲು ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದ್ದು, ರಿಗ್ ಮಾಲೀಕರು /ಏಜೆನ್ಸಿಗಳು ಕೊಳವೆ ಬಾವಿ ಕೊರೆಯಲು ಅಸಮಂಜಸ ದರಗಳನ್ನು ರೈತರಿಗೆ ಬೇಡಿಕೆ ಇಟ್ಟಲ್ಲಿ ಹಾಗೂ ರೈತರಿಗೆ ಕಿರುಕುಳ ನೀಡಿದಲ್ಲಿ, ಅಂಥಹ ರೈತರು/ಬಾಧಿತರು ದೂರುಗಳನ್ನು ಈ ಸಮಿತಿಗೆ ಸಲ್ಲಿಸಲು ಅವಕಾಶ ಇರುತ್ತದೆ. ಸಮಿತಿಯು ಇಂತಹ ದೂರುಗಳನ್ನು ಪರಿಶೀಲಿಸಿ 3 ದಿನಗಳಲ್ಲಿ ಇತ್ಯರ್ಥಪಡಿಸುವಂತೆ ತಿಳಿಸಿದರು.


ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಖಾಸಗಿ ಕೊಳವೆಬಾವಿ ಮಾಲೀಕರು ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ರನ್ವಯ ಫಾರ್ಮ್ -6 ರಲ್ಲಿ ರಿಗ್ ಯಂತ್ರಗಳ/ಘಟಕಗಳ ನೋಂದಣಿ ಮಾಡಿಸಿಕೊಳ್ಳಲು ಅರ್ಜಿಯನ್ನು ಸಲ್ಲಿಸಿ ಫಾರ್ಮ್-7ಎ ರಲ್ಲಿ ಏಜೆನ್ಸಿಯ ನೋಂದಣಿಯನ್ನು ಕಡ್ಡಾಯವಾಗಿ ಪಡೆದು ನಂತರ ಕಾರ್ಯ ನಿರ್ವಹಿಸುವಂತೆ ಸೂಚಿಸಿದ ಅವರು ಈ ಕುರಿತು ನಮೂನೆಗಳನ್ನು ಹಿರಿಯ ಭೂ ವಿಜ್ಞಾನಿಗಳು, ಜಿಲ್ಲಾ ಅಂತರ್ಜಲ ಕಛೇರಿ, ಶಿವಮೊಗ್ಗರವರ ಕಚೇರಿಯನ್ನು ಸಂಪರ್ಕಿಸಬಹುದೆಂದರು.

ರಿಗ್ ಮಾಲೀಕರು ತಾವು ಅನುಷ್ಠಾನಗೊಳಿಸುತ್ತಿರುವ ಕೊಳವೆ ಬಾವಿಗಳ ವಿವರಗಳನ್ನು ಪ್ರತಿ ಮಾಹೆ ನಿಗದಿತ ನಮೂನೆಗಳಲ್ಲಿ ಹಿರಿಯ ಭೂ ವಿಜ್ಞಾನಿಗಳು, ಜಿಲ್ಲಾ ಅಂತರ್ಜಲ ಕಚೇರಿ, ಶಿವಮೊಗ್ಗ ಇವರಿಗೆ ಸಲ್ಲಿಸಲು ಸೂಚಿಸಿದರು.

ವಿಫಲವಾದ ಕೊಳವೆ ಬಾವಿಗಳ ಕೇಸಿಂಗ್ ಪೈಪ್ ತೆಗೆದ ನಂತರ ಅದೇ ಸಮಯದಲ್ಲಿ ಸಂಪೂರ್ಣವಾಗಿ ಕೊಳವೆ ಬಾವಿಯನ್ನು ಕಡ್ಡಾಯವಾಗಿ ಸೂಕ್ತ ಕ್ರಮವಹಿಸಿ ಮುಚ್ಚಲು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಆರ್.ಡಬ್ಲ್ಯು.ಎಸ್. ಕಾರ್ಯಪಾಲಕ ಅಭಿಯಂತರ ರಾಜೇಂದ್ರ ಪ್ರಸಾದ್, ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂ ವಿಜ್ಞಾನಿ ನಿರ್ಮಲಾ ನಾದನ್ ಇತರೆ ಇಲಾಖೆ ಅಧಿಕಾರಿಗಳು, ಕೊಳವೆಬಾವಿ/ರಿಗ್ ಮಾಲೀಕರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

2 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

6 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

6 hours ago

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ Private bus loses control and…

7 hours ago

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ – 19 ವರ್ಷದ ಯುವಕ ಸ್ಥಳದಲ್ಲೇ ಸಾವು

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ - 19 ವರ್ಷದ ಯುವಕ ಸ್ಥಳದಲ್ಲೇ ಸಾವು 19-year-old Arjun…

8 hours ago

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

1 day ago