ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್ ಕೆ.ವೈ. ನಿಧನ
ರಿಪ್ಪನ್ಪೇಟೆ : ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾದರು.
ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು 2005ರಿಂದ ಕರಿಗೆರಸು ಕ್ಷೇತ್ರದಿಂದ ಮೂರು ಬಾರಿ ಕೋಡೂರು ಗ್ರಾ.ಪಂ.ಗೆ ಆಯ್ಕೆಯಾಗಿದ್ದರು. 2015 ರಲ್ಲಿ 5 ವರ್ಷಗಳ ಅವಧಿಗೆ ಕೋಡೂರು ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದರು.
ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆಯು ಮಂಗಳವಾರ ಮಧ್ಯಾಹ್ನ ಅವರ ಜಮೀನಿನಲ್ಲಿ ನೆರವೇರಿತು.
ಶಾಸಕರಾದ ಆರಗ ಜ್ಞಾನೇಂದ್ರ, ಬೇಳೂರು ಗೋಪಾಲಕೃಷ್ಣ, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್, ಕೋಡೂರು ಗ್ರಾಪಂ ಅಧ್ಯಕ್ಷ, ತಾ.ಪಂ. ಮಾಜಿ ಸದಸ್ಯ ಬಿ.ಜಿ. ಚಂದ್ರಮೌಳಿ, ಕೋಡೂರು ಗ್ರಾಪಂ ಅಧ್ಯಕ್ಷ ಉಮೇಶ್, ಉಪಾಧ್ಯಕ್ಷ ಸುಧಾಕರ್ ಹಾಗೂ ಗ್ರಾ.ಪಂ.ನ ಸರ್ವ ಸದಸ್ಯರು, ಪಿಡಿಒ, ಸಿಬ್ಬಂದಿ ವರ್ಗ ಮತ್ತಿತರರು ಮೃತರ ಮನೆಗೆ ತೆರಳಿ ಅಂತಿಮ ನಮನ ಸಲ್ಲಿಸಿ ಸಂತಾಪ ಸೂಚಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್