ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು


ತೀರ್ಥಹಳ್ಳಿ:  ಪಟ್ಟಣದಲ್ಲಿ ಬುಧವಾರ ಸಂಜೆ ಅಕ್ರಮವಾಗಿ ಗೋ ಸಾಗಾಟ ನಡೆಸಿದ್ದಾರೆ ಎಂಬ ಕಾರಣಕ್ಕೆ ನಡೆದ ನೈತಿಕ ಪೊಲೀಸ್ ಗಿರಿಯಂತಹ ಘಟನೆಯೊಂದರ ಸಂಬಂಧ ಸುಮಾರು 25 ಮಂದಿ ವಿರುದ್ಧ ಕೇಸ್ ದಾಖಲಾಗಿದೆ.

ಪಟ್ಟಣದ ಸಮೀಪದ ಕುರುವಳ್ಳಿಯ ಪುತ್ತಿಗೆ ಮಠದ ರಸ್ತೆಯಲ್ಲಿ ಅಶೋಕ ಲೈಲಾಂಡ್‌ ಗಾಡಿಯೊಂದನ್ನ ಅಡ್ಡಗಟ್ಟಿ ಅದರಲ್ಲಿದ್ದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎಂಬ ಆರೋಪದ ಅಡಿಯಲ್ಲಿ ಗಾಡಿಯನ್ನು ಅಡ್ಡಗಟ್ಟಿ ಅದರಲ್ಲಿದ್ದವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಲಾಗಿದೆ.

ತೀವ್ರ ಹಲ್ಲೆಗೊಳಗಾದ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಒಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ.

ದೂರುದಾರರು ಸಲ್ಲಿಸಿರುವ ದೂರಿನ ಪ್ರಕಾರ ಸ್ಥಳೀಯ ನಿವಾಸಿಯೊಬ್ಬರ ಬಳಿ ಆಕಳುಗಳನ್ನ ಸಾಕಲು ಹಾಗೂ ಅದರ ಸಗಣಿಯಿಂದ ವ್ಯಾಪಾರ ಮಾಡುವ ಸಲುವಾಗಿ 8 ದನಗಳನ್ನ ಖರೀದಿಸಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ 25 ಕ್ಕೂ ಹೆಚ್ಚು ಮಂದಿ ಪುತ್ತಿಗೆ ಮಠದ ರಸ್ತೆಯಲ್ಲಿ ಲೈಲ್ಯಾಂಡ್ ಗಾಡಿಯನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ. ಇದರ ದೃಶ್ಯಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಇನ್ನೂ ಇಬ್ಬರು ಗಾಯಾಳುಗಳ ಪೈಕಿ ಓರ್ವರ ಹೇಳಿಕೆ ಆಧರಿಸಿ 25 ಕ್ಕೂ ಹೆಚ್ಚು ಮಂದಿ ವಿರುದ್ದ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ನಲ್ಲಿ ಸಾಲುದ್ದ  ಸೆಕ್ಷನ್​ಗಳ ಅಡಿಯಲ್ಲಿ ಕೇಸ್ ದಾಖಲಾಗಿದೆ.  ವ್ಯಕ್ತಿಯನ್ನ ಅಕ್ರಮವಾಗಿ ಬಂಧನದಲ್ಲಿ ಇರಿಸುವುದು, ದುರ್ವರ್ತನೆ ತೋರಿ ವ್ಯಕ್ತು ನುಕ್ಸಾನು ಮಾಡುವುದು, ಅಪರಾಧ ಮಾಡುದ ಉದ್ದೇಶದಿಂದಲೇ ಕೃತ್ಯವೆಸುಗುವುದು, ಉದ್ದೇಶಪೂರ್ವಕ ನಿಂದನೆ ಹಾಗೂ ಶಾಂತಿಭಂಗ, ಕಾನೂನ ಬಾಹಿರವಾಗಿ ಜಮಾವಣೆ ಗೊಳ್ಳುವುದು, ಕಾನೂನು ಬಾಹಿರವೊಂದು ಗೊತ್ತಿದ್ದು,  ಮಾರಾಕಾಸ್ತ್ರಗಳೊಂದಿಗೆ ಜಮಾವಣೆ ಗೊಂಡು ಗಲಭೆ ಸೃಷ್ಟಿಸುವುದು, ಕೊಲೆಗೆ ಯತ್ನಿಸುವುದು, ಉದ್ದೇಶಪೂರ್ವಕವಾಗಿ ಮಾರಕಾಸ್ತ್ರದಿಂದ ಹಲ್ಲೆ ನಡೆಸುವುದು ಹೀಗೆ ಮೇಲ್ಕಂಡ ಐಪಿಸಿ ಸೆಕ್ಷನ್​ಗಳ ಅಡಿಯಲ್ಲಿ ಕೇಸ್ ದಾಖಲಾಗಿದೆ.

ಇಬ್ಬರು ಗಾಯಾಳುಗಳ ಪೈಕಿ ಓರ್ವರ ಹೇಳಿಕೆ ಆಧರಿಸಿ 25 ಕ್ಕೂ ಹೆಚ್ಚು ಮಂದಿ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅದರಲ್ಲಿ ಈಗಾಗಲೇ 7 ಮಂದಿಯನ್ನು ಬಂಧಿಸಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ. ತೀರ್ಥಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

5 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

5 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

9 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

11 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

12 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

21 hours ago