ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft
ಮನೆಯಲ್ಲಿ ಕಳ್ಳತನವಾಗಿದ್ದು(theft) ಇದಕ್ಕೆ ತನ್ನ ಸ್ವಂತ ಮಗನೇ ಕಾರಣ ಎಂದು ಹೆತ್ತ ತಾಯಿಯೇ ತನ್ನ ಮಗನ ಮೇಲೆ ಕಳ್ಳತನದ ಆರೋಪ ಹೊರಿಸಿರುವ ಘಟನೆ ಶಿವಮೊಗ್ಗ(Shivamogga) ನಗರದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ಹಿನ್ನಲೆ :
ಫೆಬ್ರವರಿ ತಿಂಗಳಿನಲ್ಲಿ ನಡೆದ ಘಟನೆ ಸಂಬಂದ ತುಂಗಾನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ : IPC 1860 (U/s-380) ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಮಹಿಳೆಯೊಬ್ಬರು ಈ ಬಗ್ಗೆ ತಡವಾಗಿ ದೂರು ನೀಡಿದ್ದಾರೆ. ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿರುವ ತಂಗಿ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಘಟನೆಯು ನಡೆದಿದೆ ಎಂದು ಆರೋಪಿಸಿದ್ದಾರೆ.
ವಾಪಸ್ ಮನೆಗೆ ಬಂದು ನೋಡಿದಾಗ ಮನೆ ಬೀಗ ಹಾಕಿರುವುದು ಕಂಡು ಇನ್ನೊಂದು ಕೀನಲ್ಲಿ ಬಾಗಿಲು ತೆಗೆದಾಗ ಮನೆಯಲ್ಲಿದ್ದ ಬಂಗಾರ , ಪ್ರಿಡ್ಜು, ಟಿವಿ, ಟಿಪಾಯಿ, ಮಿಕ್ಸಿ ಸೇರಿದಂತೆ ಗೃಹೊಪಯೋಗಿ ವಸ್ತುಗಳು ಇಲ್ಲದಿರುವುದು ಗೊತ್ತಾಗಿದೆ. ಈ ಬಗ್ಗೆ ವಿಚಾರಿಸಿದ ನಂತರ ತಮ್ಮ ಮಗ ಅದನ್ನೆಲ್ಲಾ ವಾಪಸ್ ತಂದುಕೊಡುವ ಸಾಧ್ಯತೆಯಿಂದ ಎಂದು ಕಾದಿದ್ದಾರೆ ಎನ್ನಲಾಗಿದೆ. ಅಂತಿಮವಾಗಿ ಇದೇ ವಿಚಾರದಲ್ಲಿ ಮಹಿಳೆ ತುಂಗಾನಗರ ಪೊಲೀಸ್ ಸ್ಟೇಷನ್ನಲ್ಲಿ ದೂರು ದಾಖಲಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್