ದೇಶದ ಹಿತದೃಷ್ಟಿಯಿಂದ ಮೋದಿಗೆ ಮತ ನೀಡಬೇಕು – ಬಿ ವೈ ರಾಘವೇಂದ್ರ

ರಿಪ್ಪನ್‌ಪೇಟೆ : ಪ್ರಸಕ್ತ ಕಾಲದಲ್ಲಿ ದೇಶದಲ್ಲಿ ಮೋದಿಯಿಂದ ಅಭಿವೃದ್ದಿಯ ಪರ್ವ ನಡೆಯುತಿದ್ದು ಮತದಾರರು ದೇಶದ ಹಿತದೃಷ್ಠಿಯಿಂದ ಆತ್ಮಾವಲೋಕನ ಮಾಡಿಕೊಂಡು ಮೋದಿಗೆ ಮತ ನೀಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಕರೆ ನೀಡಿದರು.


ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ ಸಂಸತ್ ಸದಸ್ಯನಾಗಿ ಆಯ್ಕೆ ಆಗಿದ್ದು ಜನಮೆಚ್ಚುವ ಆಭಿವೃದ್ದಿ ಕೆಲಸಗಳಿಗಾಗಿ ಸರ್ಕಾರದ ಹಿರಿಯರಿಂದಲೂ ಪ್ರಶಂಸೆಯನ್ನು ಪಡೆದುಕೊಂಡಿದ್ದೇನೆ. ಕ್ಷೇತ್ರದಾದ್ಯಂತ ಸಾಕಷ್ಟು ಜನಪರವಾದಂತಹ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆನುದಾನವನ್ನು ತರುವುದರೊಂದಿಗೆ ಸಂಪರ್ಕ ರಸ್ತೆ, ಮೆಡಿಕಲ್‌ ಕಾಲೇಜ್, ಕೃಷಿ, ತೋಟಗಾರಿಕಾ ಕಾಲೇಜ್, ರೈಲ್ವೆ ಸ್ಟೇಷನ್, ವಿಮಾನ ನಿಲ್ದಾಣ, ಆಕಾಶವಾಣಿ, ಸರ್ವಋತು ಜೋಗ್ ಅಭಿವೃದ್ದಿ ಹಾಗೂ ತುಮರಿ ಸಂಪರ್ಕದ ಸೇತುವೆ ನಿರ್ಮಾಣ ಕಾಮಗಾರಿಗಳ ಅಭಿವೃದ್ಧಿ ಕಾಮಗಾರಿಗಳಿಗಾಗಿ ಕೇಂದ್ರದಿಂದ 20 ಸಾವಿರ ಕೋಟಿ ರೂ. ಅನುದಾನವನ್ನು ತಂದಿರುವ ತೃಪ್ತಿ ಇದೆ ಎಂದರು.


ಕೊಲ್ಲೂರಿಗೆ ಹೊಸನಗರದಿಂದ ಅಡಗೋಡಿ ತಿರುವು ರಹಿತ ರಸ್ತೆ ಸೇತುವೆ, ಕೊಡಚಾದ್ರಿಗೆ ರೋಪ್‌ವೇ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ. ಹಾಗೆಯೇ ಮೇಗರವಳ್ಳಿಯಿಂದ ಮಣಿಪಾಲದವರಗೆ 12 ಕೋಟಿ ರೂ. ವೆಚ್ಚದ ಸುರಂಗ ಮಾರ್ಗ ಕಾಮಗಾರಿಗೆ ಯೋಜನಾ ವರದಿ ನೀಡಲಾಗಿದ್ದು ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಕೇವಲ ಒಂದೇ ವಾರದಲ್ಲಿ ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡುತ್ತಾ ತಮ್ಮ ತಾಯಿ ಮೈತ್ರಾದೇವಿಯನ್ನು ನೆನಪಿಸಿಕೊಂಡ ಸಂಸದರು ನಾನು ಬೇಗ ನಮ್ಮ ತಾಯಿಯನ್ನು ಕಳೆದುಕೊಂಡಿದ್ದು ಅವರನ್ನು ನಿಮ್ಮಲ್ಲಿ ಕಾಣುತಿದ್ದೇನೆ ಎಂದು ಭಾವುಕರಾಗಿ ನುಡಿದರು ಈ ಸಂಧರ್ಭದಲ್ಲಿ ನೆರೆದಿದ್ದ ಮಹಿಳೆಯರು ಬಿವೈ ಆರ್ ಗೆ ಜಯಕಾರ ಕೂಗಿದರು.


ಇದೇ ಸಂಧರ್ಭದಲ್ಲಿ ಗುಂಡೂರಾವ್ ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಯಡಿಯೂರಪ್ಪ ರವರ ಮೇಲೆ ನಡೆದ ಹಲ್ಲೆ ಘಟನೆಯನ್ನು ವಿವರಿಸಿ ಯಡಿಯೂರಪ್ಪ ಯಾರಿಗೂ ಹೆದರುವ ವ್ಯಕ್ತಿಯಲ್ಲ ಎಂದರು.

ಬಿಜೆಪಿ ಮಹಿಳೆ ರಾಜ್ಯಾಧ್ಯಕ್ಷ ಮಂಜುಳಾ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಎಲ್ಲಾ ಕ್ಷೇತ್ರದಲ್ಲಿಯೂ ವಿಫಲವಾಗಿದ್ದು ಕಾನೂನು ಸುವ್ಯವಸ್ಥೆಯನ್ನು ಪುಂಡರ ಕೈಯಲ್ಲಿ ಅಡವಿಟ್ಟಿದೆ ಅಡುಗೆ ಮನೆಯಿಂದ ಕುಟುಂಬವನ್ನು ಮೆಚ್ಚಿಸಿದ ಮಹಿಳೆಯರು ಈಗ ದೇಶವನ್ನು ಗೆಲ್ಲಿಸಿದ್ದಾರೆ. ನಮ್ಮ ಅಭ್ಯರ್ಥಿ ಬಿ.ವೈ.ರಾಘವೇಂದ್ರ ರವರನ್ನು ವಿರೋಧ ಪಕ್ಷದವರು ಮೆರಿಟ್ ಮೇಲೆ ಗೆಲ್ಲಲು ಸಾಧ್ಯವಿಲ್ಲ. ಆದ್ದರಿಂದ ಕಾಂಗ್ರೆಸ್ ಏಜೆಂಟರು ಚುನಾವಣೆಯನ್ನು ಸುಳ್ಳು ವಾಮಮಾರ್ಗದಿಂದ ಗೆಲ್ಲುವ ಹುನ್ನಾರ ಮಾಡುತ್ತಿದ್ದಾರೆ. ಭವಿಷ್ಯದ ಭಾರತ ನಾರಿಶಕ್ತಿಯ ಮೂಲಕ ಮುನ್ನೆಡೆಯುವುದಿದೆ. ಇದನ್ನು ಸಾಕಾರಗೊಳಿಸಬೇಕಾದರೆ ಪ್ರತಿ ಮಹಿಳೆಯರು ಮತದಾರರನ್ನು ಸಂಪರ್ಕಿಸಿ ಬಿಜೆಪಿಯನ್ನು ಬೆಂಬಲಿಸುವಂತೆ ಮನಃಪರಿವರ್ತನೆ ಮಾಡಿ ಪಕ್ಷಕ್ಕೆ ಮತ ಕೊಡಿಸಬೇಕೆಂದರು.

ಸಮಾವೇಶದಲ್ಲಿ ಮಾಜಿ ಶಾಸಕ ಬಿ.ಸ್ವಾಮಿರಾವ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಸುಬ್ರಹ್ಮಣ್ಯ, ಮಹಿಳಾ ಅಧ್ಯಕ್ಷೆ ಆಶಾ ರವೀಂದ್ರ, ಮುಖಂಡರಾದ ವೀಣಾಶೆಟ್ಟಿ, ಜೆಡಿಎಸ್ ಮುಖಂಡರಾದ ಆರ್.ಎ.ಚಾಬುಸಾಬ್, ಎನ್ ವರ್ತೇಶ್, ಜಿ.ಎಸ್.ವರದರಾಜ್, ಜಿ.ಪಂ.ಮಾಜಿ ಸದಸ್ಯೆ ಎ.ಟಿ.ನಾಗರತ್ನ, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷೆ ನಾಗರತ್ನ ದೇವರಾಜ್, ಸರಸ್ವತಿ, ಲೀಲಾ ಉಮಾಶಂಕರ್, ರೇಖಾ ರವಿ, ಪದ್ಮಾ ಸುರೇಶ್, ಗಣಪತಿ ಬಿಳಗೋಡು ಇನ್ನಿತರರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

6 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

6 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

6 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

6 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

15 hours ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

15 hours ago