ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!!|MODI

ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!!


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಬಿಜೆಪಿ ಮುಖಂಡರು ಮತ್ತು ಜೆಡಿಎಸ್ ಮುಖಂಡರು ಈ ಕಾರ್ಯಕ್ರಮದ ವೇದಿಕೆಯಲ್ಲಿ ಇರುತ್ತಾರೆ ಎಂದು ತಿಳಿಸಿದರು.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸುತ್ತಾರೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ ಮತ್ತು ಚಿಕ್ಕಮಗಳೂರಿನ ಅಭ್ಯರ್ಥಿಗಳು ವೇದಿಕೆ ಮೇಲೆ ಇರಲಿದ್ದಾರೆ. ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ ವೇದಿಕೆ ಮೇಲೆ ಇರುತ್ತಾರೆ. ಮಂಗಳೂರಿನ ಅಭ್ಯರ್ಥಿ ಬೃಜೇಶ್ ಚೌಟ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಧಾನಿಯವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಿ.ಟಿ.ರವಿ, ಮಾಜಿ- ಹಾಲಿ ಶಾಸಕರು ವೇದಿಕೆಯಲ್ಲಿ ಇರುತ್ತಾರೆ ಎಂದರು. ವಿಶಿಷ್ಟ ಯೋಜನೆಯನ್ನು ಮಾಡಿದ್ದು, ಪ್ರಧಾನಿಯವರು ಬೃಹತ್ ಪೆಂಡಾಲ್‍ನಲ್ಲಿ ಜನರನ್ನು ವಾಹನದಲ್ಲಿ ವೀಕ್ಷಿಸುತ್ತ, ಕೈ ಬೀಸುತ್ತ ವೇದಿಕೆಗೆ ಬರುತ್ತಾರೆ ಎಂದು ವಿವರಿಸಿದರು.

ರಾಜ್ಯದಲ್ಲಿ 28ಕ್ಕೆ 28 ಸೀಟು ಗೆಲ್ಲುವುದರ ಕಡೆ ಪಕ್ಷ ಗಮನ ಕೊಡಲಿದೆ. ಸಾರ್ವಜನಿಕರು ಈ ಸಭೆಯನ್ನು ಯಶಸ್ವಿಯಾಗಿ ಮಾಡಬೇಕೆಂದು ಕೋರಿದರು. ವಿಕಸಿತ ಭಾರತ ಸಂಕಲ್ಪಕ್ಕೆ ಜನರು ಸ್ಪಂದಿಸಲು ಮನವಿ ಮಾಡಿದರು. ಇವತ್ತು ಹೋಗಿ ಈಶ್ವರಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. ಅವರು ಕಾರ್ಯಕ್ರಮಕ್ಕೆ ಬರಲಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಸಂಸದ ಬಿ.ವೈ.ರಾಘವೇಂದ್ರ, ಸ್ಥಳೀಯ ಬಿಜೆಪಿ ಮುಖಂಡರು, ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

1 hour ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

2 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

2 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

4 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

8 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

8 hours ago