ಬಂಗಾರಪ್ಪನವರಿಗೆ ‘ಸೋಲಿಲ್ಲದ ಸರದಾರ’ನ ಪಟ್ಟ ಕೊಟ್ಟಿದ್ದ ಕಾರಿನ ನಂಬರ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!! |Parliament Election

ಬಂಗಾರಪ್ಪನವರಿಗೆ ‘ಸೋಲಿಲ್ಲದ ಸರದಾರ’ನ ಪಟ್ಟ ಕೊಟ್ಟಿದ್ದ ಕಾರಿನ ನಂಬರ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!!


ಶಿವಮೊಗ್ಗ – ತಂದೆಯ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಕಾಯುತ್ತಿರುವ ಮಾಜಿ ಮುಖ್ಯಮಂತ್ರಿ ದಿ. ಸಾರೇಕೊಪ್ಪ ಬಂಗಾರಪ್ಪ ಅವರ ಪುತ್ರಿ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್‌ಕುಮಾರ್‌ ಈಗ ಶಿವಮೊಗ್ಗದಲ್ಲಿ ಬಾಡಿಗೆ ಮನೆ ಮಾಡಿ, ಪ್ರಚಾರಕ್ಕೆ ಹೊಸ ಕಾರನ್ನೂ ಖರೀದಿ ಮಾಡಿದ್ದಾರೆ.

ಈ ಕಾರಿನ ನಂಬರ್‌ ಈಗ ಆಕರ್ಷಣೆಗೆ ಕಾರಣವಾಗಿದೆ. ತಮ್ಮ ತಂದೆಯ ಲಕ್ಕಿ ಕಾರಿನ ನಂಬರ್‌ ಅನ್ನೇ ಹೊಸ ಕಾರಿಗೂ ಪಡೆದಿದ್ದು ಅದರಲ್ಲೇ ಪ್ರಚಾರ ಮಾಡಲಿದ್ದಾರೆ.

ಬಂಗಾರಪ್ಪ ಅವರು ಸಿಎಂ ಆದ ನಂತರ ಟಾಟಾ ಸಫಾರಿ ಕಾರನ್ನು ಖರೀದಿ ಮಾಡಿದ್ದರು. ಅದರ ನಂಬರ್‌ 1179 ಆಗಿತ್ತು. ನಂತರ ಖರೀದಿ ಮಾಡಿದ ಕಾರುಗಳಿಗೂ ಅದೇ ನಂಬರ್‌ ಪಡೆದಿದ್ದರು. ಪುತ್ರ ಮಧು ಬಂಗಾರಪ್ಪ ಕೂಡ ಅವರ ಕಾರುಗಳಿಗೆ ಅದೇ ನಂಬರ್‌ ಬಳಸುತ್ತಾರೆ. ಈಗ ಪುತ್ರಿ ಗೀತಾ ಕೂಡ ಅದೇ ನಂಬರಿನ ಮೊರೆ ಹೋಗಿದ್ದಾರೆ. ಬಂಗಾರಪ್ಪನವರಿಗೆ ಸೋಲಿಲ್ಲದ ಸರದಾರನ ಪಟ್ಟ ಕೊಟ್ಟಿದ್ದ ಕಾರಿನ ನಂಬರ್‌ ಗೀತಾ ಅವರ ಪಾಲಿಗೆ ಅದೃಷ್ಟ ತರುವುದೇ ಕಾದುನೋಡಬೇಕಿದೆ.

ಹೊಸ ಮನೆ ಮುಂದೆ ಮಹೀಂದ್ರಾ ಕಂಪನಿಯ ಎಕ್ಸ್‌ಯೂವಿ 700 ಕಾರು ಬಂದಿದ್ದು ಸೋಮವಾರದಿಂದ ಅಧಿಕೃತವಾಗಿ ಪ್ರಚಾರ ಆರಂಭಿಸಲಿದ್ದಾರೆ. ಈಗಾಗಲೇ ಕಾರ್ಯಕರ್ತರು ಸಹ ಸಂಭ್ರಮ ವ್ಯಕ್ತಪಡಿಸಿದ್ದು ಅಭ್ಯರ್ಥಿ ಸ್ವಾಗತಕ್ಕೆ ಅಣಿಯಾಗಿದ್ದಾರೆ. 2014ರಲ್ಲಿ ಜೆಡಿಎಸ್‌ ಚಿಹ್ನೆಯಡಿ ಸ್ಪರ್ಧಿಸಿದ್ದ ಗೀತಾ ಶಿವರಾಜ್‌ಕುಮಾರ್‌ ಈ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…

8 hours ago

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…

9 hours ago

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…

9 hours ago

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

10 hours ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

14 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

16 hours ago