ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ: ಶಾಸಕ ಗೋಪಾಲ ಕೃಷ್ಣ ಬೇಳೂರು
ರಿಪ್ಪನ್ ಪೇಟೆ : ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ ಅವರುಗಳಿಗೆ ಪ್ರೋತ್ಸಾಹವನ್ನು ನೀಡಿದಾಗ ಅವರುಗಳು ತಮಗೆ ಆಸಕ್ತಿ ಇರುವ ಪ್ರತಿಭೆಗಳಲ್ಲಿ ಮುಂದುವರಿದು ಅದರಲ್ಲಿ ಉತ್ತಮ ಸಾಧನೆಯನ್ನು ಮಾಡಿ ಸಮಾಜದ ಮುಖ್ಯ ವಾಹಿನಿಗೆ ಬರುತ್ತಾರೆ ಎಂದು ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷ ಹಾಗೂ ಸಾಗರ ಹೊಸ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಬಾಲ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಹಿಂದೆ ಗ್ರಾಮೀಣ ಪ್ರದೇಶದ ಮಕ್ಕಳು ಅತ್ಯುತ್ತಮವಾದ ಪ್ರತಿಭೆಗಳನ್ನು ಹೊಂದಿದ್ದರು ಆದರೆ ಅವರುಗಳಿಗೆ ಅವಕಾಶಗಳು ಮತ್ತು ಪ್ರೋತ್ಸಾಹಗಳು ಸಿಗುತ್ತಿರಲಿಲ್ಲ. ಈಗ ಸರಕಾರ ಮತ್ತು ಶಿಕ್ಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹವನ್ನು ಮತ್ತು ಪ್ರೇರಣೆಯನ್ನು ನೀಡಿ ಅವರುಗಳ ಪ್ರತಿಭೆಗಳನ್ನು ಸಮಾಜಕ್ಕೆ ಪರಿಚಯಿಸುವುದರ ಮೂಲಕ ಅವರುಗಳಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುತ್ತಿದ್ದಾರೆ. ಪ್ರತಿಯೊಂದು ಮಗು ತನ್ನದೇ ಆದ ಒಂದು ಪ್ರತಿಭೆಯನ್ನು ಹೊಂದಿರುತ್ತದೆ ಎಂದರು.
ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿರುವ ರಾಜ್ಯ ಸರ್ಕಾರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ ಹಾಗೂ ಚುನಾವಣಾ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ಹೇಳಿದ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದೆ. ಸರಕಾರ ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿಗಳ ಫಲಾನುಭವಿಗಳು ಅದರ ಪ್ರಯೋಜನವನ್ನು ಪಡೆದುಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಮಿತ್ರ ನಾಗರಾಜ್, ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಹೇಮಾವತಿ ಸತೀಶ್ ಗ್ರಾ ಪಂ,ಅಧ್ಯಕ್ಷರು,
ತಿಮ್ಮಪ್ಪ ಬೆಳ್ಳೂರು ಗ್ರಾ ಪಂ ಉಪಾಧ್ಯಕ್ಷರು, ಸದಸ್ಯರಾದ ರಾಜೇಶ್, ರವೀಂದ್ರ, ಕವಿತಾ, ಅರುಣ್ ಕಟ್ಟೆ, ಷಣ್ಮುಖಪ್ಪ,ಪಲ್ಲವಿ ನಾಗರಾಜ್, ಶಾಲಾ ಅಭಿವೃದ್ಧಿ ಅಧ್ಯಕ್ಷ,ಪುರುಷೋತ್ತಮ್,ಪಿಡಿಒ ಕುಶ,ಮೇಲ್ವಿಚಾರಕಿ ಚಂದ್ರಕಲಾ,ಅಂಗನವಾಡಿ ಕಾರ್ಯಕರ್ತೆ ವೀಣಾ,ಉಪಸ್ಥಿತರಿದ್ದರು.
ಶಿವಮೂರ್ತಿ,ಎಂ ಎಸ್, ಶಿಕ್ಷಕರು ಕಾರ್ಯಕ್ರಮ ನಿರೂಪಣೆ ಮಾಡಿದರು,ಕಿರಣ್ ಸ್ವಾಗತಿಸಿದರು, ಮೇದಿನಿ ವಂದನಾರ್ಪಣೆ ಮಾಡಿದರು,
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್