January 11, 2026

ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand

ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand


ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಜನರಿಗೆ ಭಾರತ್ ಬ್ರಾೃಂಡ್ ಅಕ್ಕಿ ಜೊತೆಗೆ ಬೇಳೆಕಾಳನ್ನು ಕೂಡ ವಿತರಿಸಲಿದ್ದಾರೆ ಎಂದು ಗ್ರಾಪಂ ಉಪಾಧ್ಯಕ್ಷ ಹಾಗೂ ತಾಲೂಕ್ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಸುಧೀಂದ್ರ ಪೂಜಾರಿ ಹೇಳಿದರು.

ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದಲ್ಲಿ ಭಾರತ್ ಬ್ರಾೃಂಡ್ ಅಕ್ಕಿ ವಿತರಣ ಕಾರ್ಯಕ್ರಮದ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ, ಕೆ.ಜಿ.ಗೆ ರೂ. 29ರಂತೆ ಭಾರತ್ ಬ್ರಾೃಂಡ್ ಅಕ್ಕಿ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಅಕ್ಕಿಯ ಜತೆಗೆ ಬೇಳೆಕಾಳು ಕೂಡ ಜನತೆಗೆ ಕೈಗೆಟುಕುವ ದರದಲ್ಲಿ ವಿತರಿಸಲಾಗುತ್ತದೆ ಎಂದು ತಿಳಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು.

ಭಾರತ್ ಅಕ್ಕಿಯನ್ನು ಸಾರ್ವಜನಿಕರು ಮುಗಿಬಿದ್ದು ಖರೀದಿಸಿ ಪ್ರಧಾನಿ ಮೋದಿರವರಿಗೆ ಜೈಕಾರ ಹಾಕಿದರು.

ಈ ಸಂಧರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಇದ್ದರು.

About The Author

Leave a Reply

Your email address will not be published. Required fields are marked *

Exit mobile version