ರಿಪ್ಪನ್‌ಪೇಟೆಯಲ್ಲಿ ಲೇಔಟ್‌ಗಳು ನಕಲಿ ದಾಖಲೆ ಸೃಷ್ಟಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಪಂ ಸದಸ್ಯರ ಆರೋಪಕ್ಕೆ ಸ್ಪಷ್ಟನೆ | Ripponpet

ರಿಪ್ಪನ್‌ಪೇಟೆಯಲ್ಲಿ ಲೇಔಟ್‌ಗಳು ನಕಲಿ ದಾಖಲೆ ಸೃಷ್ಟಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಪಂ ಸದಸ್ಯರ ಆರೋಪಕ್ಕೆ ಸ್ಪಷ್ಟನೆ


ರಿಪ್ಪನ್‌ಪೇಟೆ;-ಇಲ್ಲಿನ ಗ್ರಾಮಪಂಚಾಯ್ತಿ ವಸತಿ ನಿವೇಶನ ಉದ್ದೇಶಕ್ಕಾಗಿ ಭೂಪರಿವರ್ತನೆಯನ್ನು ಮಾಡಿರುವ ಕೆಲವು ಲೇಔಟ್‌ಗಳು ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಮ ಪಂಚಾಯ್ತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಆರೋಪದಲ್ಲಿ ಯಾವುದೇ ಹುರುಳಿಲ್ಲ ಗ್ರಾಪಂ ಸದಸ್ಯನಾಗಿ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚಕಾರವೆತ್ತದೇ ಈಗ ಬಹಿರಂಗವಾಗಿ ಆರೋಪಿಸುತ್ತಿರುವುದು ಖಂಡನೀಯ ಎಂದು ಗ್ರಾಮ ಪಂಚಾಯ್ತಿ ಸದಸ್ಯ  ನಿರೂಪ್ ಕುಮಾರ್ ಹೇಳಿದರು.

ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಗವಟೂರು ಗ್ರಾಮದ ಸರ್ವೇ ನಂ 361/2 ರಲ್ಲಿ 1.09 ಎಕರೆಗುಂಟೆ ಕೃಷಿ ಭೂಮಿಯನ್ನು ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತಿಸಲು ಖತಿಜಾಭಿ ಕೋಂ ಖಾಸಿಂಸಾಬ್ ಇವರು ಅರ್ಜಿಸಲ್ಲಿಸಿರುತ್ತಾರೆ.ಅದರೆ ಈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಇರುವುದು  ವಾಸ್ತವವಾಗಿದ್ದು ಗ್ರಾಮ ಪಂಚಾಯ್ತಿ ಅಭಿವೃದ್ದಿ ಆಧಿಕಾರಿಗಳು ನಿರಾಕ್ಷೇಪಣಾ ಪತ್ರ ನೀಡಿರುತ್ತಾರೆ ಎಂದು ತಿಳಿಸಿದರು.

ಈ ಲೇಔಟ್ ಗೆ ನಗರ ಮತ್ತು ಗ್ರಾಮೀಣ ಯೋಜನಾ ಇಲಾಖೆಯವರು ಕಾನೂನು ಬದ್ದವಾಗಿಯೇ ತಾಂತ್ರಿಕ ಅನುಮೋದನೆ ನೀಡಿದ್ದಾರೆಂದು ಸ್ಪಷ್ಟನೆ ನೀಡಿದರು


ಲೇಔಟ್ ಬಗ್ಗೆ ಆರೋಪ ಮಾಡುತ್ತಿರುವ ಗ್ರಾ ಪಂ ಸದಸ್ಯರು ಈ ಹಿಂದೆ ಖಾಸಗಿ ಲೇಔಟ್ ಮಾಲೀಕರೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ  ಸಿಂಥೆಟಿಕ್ಸ್ ಡ್ರಮ್ ಪಡೆದಿರುವುದ್ದು ಜಗಜ್ಜಾಹಿರಾಗಿದೆ.ಎರಡು ವರ್ಷ ಸುಮ್ಮನಿದ್ದ ಇವರು ಈಗ ತಿರುಗಿ ಬಿದ್ದಿದ್ದಾರೆ ಕಾರಣ ತಮ್ಮ ಕುಟುಂಬದ  ಒಡೆತನದ ಜಮೀನಿಗೆ ಸಂಪರ್ಕ ಕಲ್ಪಿಸುವ ರಸ್ತೆ ವಿಚಾರದಲ್ಲಿ ಈ ರೀತಿಯಲ್ಲಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಲೇಔಟ್ ಗೆ ಸಂಬಂಧಿಸಿದ ದಾಖಲೆಗಳನ್ನು ಜೋಪಾನ ಮಾಡಿಕೊಳ್ಳುವ ಜವಾಬ್ದಾರಿ ಗ್ರಾಮಾಡಳಿತದ್ದು ಅಲ್ಲಿ ಮೂಲ ದಾಖಲೆಯಿಲ್ಲರುವುದು ನಮಗೆ ಸಂಬದಿಸಿರುವುದಿಲ್ಲ ಇದಕ್ಕೆ ಗ್ರಾಪಂ ಅಧಿಕಾರಿಗಳು ಜವಬ್ದಾರರಾಗಿರುತ್ತಾರೆ.

ಲೇಔಟ್ ಮಾಡುವಾಗ ಸಾರ್ವಜನಿಕರಿಗೆ ಮೂಲ ಸೌಕರ್ಯ ಒದಗಿಸುವಂತಹ ರಸ್ತೆ ಸಂಪರ್ಕ ಬೀದಿ ದೀಪ ಒಳಚರಂಡಿ ಪಾರ್ಕ್ ಸಿಎ ನಿವೇಶನಗಳ ಹೀಗೆ ಮೂಲಸೌಲಭ್ಯಗಳ ನೀಲನಕ್ಷೆಯಂತೆ ನಗರ ಮತ್ತು ಗ್ರಾಮೀಣ ಯೋಜನೆಯವರ ತಾಂತ್ರಿಕ ಅನುಮೋದನೆ ನೀಡುತ್ತಾರೆ.ಮತ್ತು ಈಗಾಗಲೇ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಲೇಔಟ್ ಮಾಲೀಕರ ಬಗ್ಗೆ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡಿ ಬ್ಲಾಕ್ ಮೇಲ್ ಮಾಡುವವರ ಸಂಖ್ಯೆ ದಿನ ನಿತ್ಯ ಹೆಚ್ಚಾಗುತ್ತಿದೆ ಈ ಬಗ್ಗೆ ಹೆದರು ಪ್ರಶ್ನೆಯೇ ಇಲ್ಲ ಎಲ್ಲಾದನ್ನು ಎದುರಿಸಲು ಸಿದ್ದವಿರುವುದಾಗಿ
ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅನ್ವರ್ ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

4 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago