ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-03-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 19/03/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ಶಿವಮೊಗ್ಗದ ಎಂ ಆರ್ ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???
ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ