ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..???
ಕೇಂದ್ರ ಚುನಾವಣಾ ಆಯೋಗವು ಇಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದ್ದರೆ, ಎರಡನೇ ಹಂತದ ಮತದಾನ ಮೇ7ರಂದು ನಡೆಯಲಿದೆ. ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಬರಲಿದೆ.
ಕರ್ನಾಟಕದಲ್ಲಿ 2ನೇ ಹಂತದ ಮತದಾನ
ಕರ್ನಾಟಕದಲ್ಲಿ ಒಟ್ಟು 2 ಹಂತಗಳಲ್ಲಿ ಎಲೆಕ್ಷನ್ ನಡೆಯಲಿದೆ. ಜೊತೆಗೆ ಒಂದು ಕ್ಷೇತ್ರಕ್ಕೆ ಉಪ ಚುನಾವಣೆ ಕೂಡ ನಡೆಯಲಿದೆ. ರಾಜ್ಯದಲ್ಲಿ ಒಟ್ಟೂ 28 ಕ್ಷೇತ್ರಗಳಿದ್ದು, 2 ಹಂತಗಳಲ್ಲಿ ಎಲೆಕ್ಷನ್  ನಡೆಸುವುದಾಗಿ ಚುನಾವಣಾ ಆಯೋಗ ಹೇಳಿದೆ
ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್ 26, ಶುಕ್ರವಾರದಂದು ನಡೆಯಲಿದೆ. ಎರಡನೇ ಹಂತದ ಚುನಾವಣೆ ಮೇ 7, ಮಂಗಳವಾರದಂದು ನಡೆಯಲಿದೆ.
ಮೊದಲ ಹಂತದ ಮತದಾನ ಏಪ್ರಿಲ್ 26 ಕ್ಕೆ – ಎಲ್ಲೆಲ್ಲಿ..??
ಉಡುಪಿ – ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್‌ಸಿ)
ದ್ವಿತೀಯ ಹಂತದ ಮತದಾನ ಮೇ 7ಕ್ಕೆ… ಎಲ್ಲೆಲ್ಲಿ..???
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್‌ಸಿ), ಗುಲ್ಬರ್ಗಾ (ಎಸ್‌ಸಿ), ರಾಯಚೂರು (ಎಸ್‌ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ
		 
                         
                         
                         
                         
                         
                         
                         
                         
                         
                        
