ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬುಧವಾರ ಸಂಜೆ ಬಿಡುಗಡೆ ಮಾಡಿದೆ. 72 ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಡ್ ಘೋಷಣೆ ಮಾಡಿದೆ. ನಿರೀಕ್ಷೆಯಂತೆ ಮೈಸೂರು-ಕೊಡಗು ಕ್ಷೇತ್ರದಿಂದ ರಾಜಕುಮಾರ ಯದುವೀರ್ ಒಡೆಯರ್‌ಗೆ ಬಿಜೆಪಿ ಟಿಕೆಟ್ ನೀಡಿದೆ.
ಅಚ್ಚರಿ ಮೂಡಿಸಿದ್ದ ಕ್ಷೇತ್ರ ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಟಿಕೆಟ್ ಲಭ್ಯವಾಗಿದೆ. ಶಿವಮೊಗ್ಗದಲ್ಲಿ ನಿರೀಕ್ಷೆಯಂತೆ ಸಂಸದ ಬಿ.ವೈ.ರಾಘವೇಂದ್ರರವರು ಟಿಕೆಟ್ ಪಡೆದುಕೊಂಡಿದ್ದಾರೆ.
ಹಿಂದಿನ ಎರಡು ಬಾರಿ ಈ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಮಿಸ್ ಆಗಿದೆ. ಹಾಲಿ ಸಂಸದರಾಗಿದ್ದ 9 ಮಂದಿಗೆ ಟಿಕೆಟ್ ನೀಡಲಾಗಿಲ್ಲ. ಇದರಲ್ಲಿ ಮೂರು ಮಂದಿ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡೋದಿಲ್ಲ ಎಂದಿದ್ದರು. ಆ ಕಾರಣಕ್ಕಾಗಿ ಬೇರೆಯವರಿಗೆ ಟಿಕೆಟ್ ನೀಡಲಾಗಿದೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಟಿಕೆಟ್‌ಅನ್ನು ಇನ್ನೂ ಘೋಷಣೆ ಮಾಡಲಾಗಿಲ್ಲ. ಈ ಕ್ಷೇತ್ರದಲ್ಲಿ ಯಾರು ಟಿಕೆಟ್ ಪಡೆಯಲಿದ್ದರೆ ಎನ್ನುವುದನ್ನು ಹೈಕಮಾಂಡ್ ನಾಯಕರೇ ತೀರ್ಮಾನ ಮಾಡಲಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್‌ಗಳ ಕ್ಷೇತ್ರವನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಪ್ರಮುಖವಾಗಿ ತುಮಕೂರು ಕ್ಷೇತ್ರದಿಂದ ವಿ. ಸೋಮಣ್ಣ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಿಜೆಪಿಯ 9 ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ನಳಿನ್ ಕುಮಾರ್ ಕಟೀಲ್‌ಗೆ ದಕ್ಷಿಣ ಕನ್ನಡ, ಮೈಸೂರು ಕೊಡಗು ಕ್ಷೇತ್ರದಿಂದ ಪ್ರತಾಪ್ ಸಿಂಹ, ಕೊಪ್ಪಳದಿಂದ ಕರಡಿ ಸಂಗಣ್ಣ, ಬೆಂಗಳೂರು ಉತ್ತರದಿಂದ ಸದಾನಂದ ಗೌಡ, ಬಳ್ಳಾರಿಯಲ್ಲಿ ದೇವೇಂದ್ರಪ್ಪ ಅವರಿಗೆ ಟಿಕೆಟ್ ನಿರಾಕರಿಸಲಾಗಿದ್ದರೆ, ಚಾಮರಾಜನಗರದಲ್ಲಿ ಶ್ರೀನಿವಾಸ್ ಪ್ರಸಾದ್, ಹಾವೇರಿಯಲ್ಲಿ ಸಿಎಂ ಉದಾಸಿ, ತುಮಕೂರಿನಲ್ಲಿ ಜಿಎಸ್ ಬಸವರಾಜ್ ಹಾಗೂ ದಾವಣಗೆರೆಯಲ್ಲಿ ಜಿಎಂ ಸಿದ್ಧೇಶ್ವರ ನಿವೃತ್ತಿ ಘೋಷಣೆ ಮಾಡಿರುವ ಕಾರಣ ಬೇರೆಯವರಿಗೆ ಟಿಕೆಟ್ ನೀಡಲಾಗಿದೆ.
ಟಿಕೆಟ್ ಪಡೆದ ರಾಜ್ಯದ 20 ಅಭ್ಯರ್ಥಿಗಳು
ಬಿಜಾಪುರ- ರಮೇಶ್ ಜಿಗಜಿಣಗಿ
ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
ಕಲಬುರಗಿ- ಉಮೇಶ್ ಜಾಧವ್
ಬೀದರ್- ಭಗವಂತ ಖೂಬಾ
ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ- ಪ್ರಹ್ಲಾದ್ ಜೋಶಿ
ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ- ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
ತುಮಕೂರು – ವಿ. ಸೋಮಣ್ಣ
ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ- ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್