ವೃದ್ದೆಯನ್ನು ಹತೈಗೈದು ಹುಂಚದ ಮುತ್ತಿನ ಕೆರೆಯಲ್ಲಿ ಬಿಸಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಬಾಳೂರಿನಲ್ಲಿಯೇ ನಡೆದಿತ್ತು ಹತೈ | Crime News

ವೃದ್ದೆಯನ್ನು ಹತೈಗೈದು ಹುಂಚದ ಮುತ್ತಿನ ಕೆರೆಯಲ್ಲಿ ಬಿಸಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಬಾಳೂರಿನಲ್ಲಿಯೇ ನಡೆದಿತ್ತು ಹತೈ


ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಹತೈಗೈದು ಬಿಸಾಡಿದ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೊಳಲೂರು ಗ್ರಾಮದ ಜಯಮ್ಮ(62) ಎಂಬುವವರನ್ನು ಕೋಡೂರು ನಿವಾಸಿ ಮಯೂರ (24) ತನ್ನ ಅಪ್ರಾಪ್ತ ಸ್ನೇಹಿತನೊಂದಿಗೆ ಸೇರಿಕೊಂಡು ಮೈಮೇಲಿದ್ದ ಒಡವೆಗಾಗಿ ಕೊಲೆ ಮಾಡಿದ್ದಾರೆ.ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನಡೆದಿದ್ದೇನು ..??

ದಿನಾಂಕ:18/03/2024 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.

ಪ್ರಕರಣವನ್ನು ಕೈಗೆತ್ತಿಕೊಂಡ ಸಿಪಿಐ ಗುರಣ್ಣ ಹೆಬ್ಬಾಳ್ ಹಾಗೂ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳ ತಂಡ ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದರು.


ಈ ಪ್ರಕರಣದಲ್ಲಿ ಹೊಸನಗರ ತಾಲೂಕು ರಿಪ್ಪನ್‌ ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೋಡೂರು ಯಳಗಲು ಗ್ರಾಮದ ಮಯೂರ ಕೆ( 24) ವರ್ಷ ಈತನು ತನ್ನ ಅಪ್ರಾಪ್ತ ಸ್ನೇಹಿತ ನೊಂದಿಗೆ ಹಣ ಹಾಗೂ ಬಂಗಾರದ ಆಸೆಯಿಂದ ತನ್ನ ಅತ್ತೆ ಹೊಳಲೂರು ಗ್ರಾಮದ ಸೀತಾರ ರವರು ಕೆಲಸ ಮಾಡುತ್ತಿದ್ದ ಮಠದಲ್ಲಿ, ಕಸಗುಡಿಸುವ ಕೆಲಸ ಮಾಡುತ್ತಿದ್ದ ಜಯಮ್ಮ ಕೋಂ ಕುಮಾರ, 62 ವರ್ಷ ರವರ ಹತ್ತಿರ ಕೈಸಾಲವಾಗಿ ಹಣತೆಗೆದುಕೊಂಡು ಅದನ್ನು ವಾಪಾಸ್ ಕೊಡಲಾಗದೇ ಆಕೆಯ ಹತ್ತಿರ ಹಣ ಮತ್ತು ಬಂಗಾರವಿರುವುದನ್ನು ಗಮನಿಸಿ ಬುದ್ಧಿವಂತಿಕೆಯಿಂದ ರಿಪ್ಪನ್ ಪೇಟೆಯಲಿ ಸೈಟ್ ಕೊಡಿಸುವುದಾಗಿ ನಂಬಿಸಿ ರಿಪ್ಪನ್‌ ಪೇಟೆಗೆ ಕರೆದುಕೊಂಡು ಬಂದು ನಂತರ ಮಾರುತಿ ವ್ಯಾಗನಾರ್ ಕಾರಿನಲ್ಲಿ ಕೂರಿಸಿಕೊಂಡು ಬಾಳೂರು ಗ್ರಾಮದ ಹತ್ತಿರ ಕಾರಿನಲಿಯೇ ಹಿಂಬದಿಯಿಂದ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ, ಕೊಲೆಯನ್ನು ಮರೆ ಮಾಚುವ ಉದ್ದೇಶದಿಂದ ಬೇಲಿ ಕಂಬದ ಕಲ್ಲನ್ನು ಜೊತೆಗೆ ಪ್ಲಾಸ್ಟಿಕ್‌ ಹಗದಿಂದ ಸುತ್ತಿ ಬಿಗಿದು ಅದೇ ದಿನ ರಾತ್ರಿ ಸುಮಾರು 10-45 ಗಂಟೆಗೆ ಹುಂಚಾ ಮುತ್ತಿನ ಕೆರೆಯಲ್ಲಿ ಮೃತದೇಹವನ್ನು ಹಾಕಿ ಹೋಗಿರುತ್ತಾರೆ,

ಕಾರ್ಯಾಚರಣೆಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ರವರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ, ಡಿವೈಎಸ್ ಪಿ ಗಜಾನನ ವಾಮನ ಸುತಾರ ನಿರ್ದೇಶನದಲಿ, ಸಿಪಿಐ ಜಿಎಸ್ ಹೆಬ್ಬಾಳ್ ರವರು ಮತ್ತು ಚಾಣಾಕ್ಷ ಅಧಿಕಾರಿ ರಿಪ್ಪನ್ ಪೇಟೆ ಠಾಣಾ ಪಿಎಸ್ ಐ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ  ಸಿಬ್ಬಂದಿಯವರಾದ ನಗರ ಠಾಣೆಯ ಕಿರಣ್ ಕುಮಾರ ,ರಿಪ್ಪನ್‌ಪೇಟೆ ಠಾಣೆಯ ಶಿವಕುಮಾರ ನಾಯ್ಕ್ ,ಸಂತೋಷ್ ಕೊರವರ ,ಹೊಸನಗರ ಠಾಣೆಯ ಸುನೀಲ್ ರಿಪ್ಪನ್‌ಪೇಟೆ ಠಾಣೆಯ ಉಮೇಶ್ ಹೆಚ್ ಸಿ ಹಾಗೂ ಮಧುಸೂಧನ್ ರವರನೊಳಗೊಂಡ ತಂಡವು ತೀವ್ರ ಕಾರ್ಯಾಚರಣೆಯಿಂದ ಆರೋಪಿತರನ್ನು ಪತ್ತೆ ಹಚ್ಚಿ, ಮಾನ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

5 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

5 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

9 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

11 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

12 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

21 hours ago