ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | Eshwarappa

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ |


ಶಿವಮೊಗ್ಗ : ನೊಂದ ಬಿಜೆಪಿ ಕಾರ್ಯಕರ್ತರ ದನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ.

ಕೆ.ಇ. ಕಾಂತೇಶ್ ಅವರಿಗೆ ಬಿಜೆಪಿಯಿಂದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ವಿಚಾರಕ್ಕೆ ಸಂಬಂಧಿಸಿ ಶಿವಮೊಗ್ಗ ನಗರದ ಬಂಜಾರ್ ಭವನದಲ್ಲಿ ಸ್ವಪ್ರತಿಷ್ಠೆಯ ಪ್ರದರ್ಶನವಲ್ಲ ಸ್ವಾಭಿಮಾನದ ಸಂಘರ್ಷ ಎನ್ನುವ ಘೋಷವಾಕ್ಯದಲ್ಲಿ ಮುಂದಿನ ರಾಜಕೀಯ ನಡೆ ಕುರಿತು ಮಹತ್ವದ ಸಭೆಯಲ್ಲಿ ಈಶ್ವರಪ್ಪ ಘೋಷಣೆ ಮಾಡಿದ್ದಾರೆ.

ಉದ್ವೇಗದ ತೀರ್ಮಾನ ಅಲ್ಲ, ಒಂದೇ ನಿಮಿಷದಲ್ಲಿ ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಪತ್ರ ಕೊಟ್ಟಿದ್ದೆ. ಹಿಂದುತ್ವಕ್ಕೆ ಅನ್ಯಾಯ ಆಗಬಾರದು, ಒಂದೇ ಕುಟುಂಬದ ಕೈಯಲ್ಲಿ ಪಕ್ಷ ಇರಬಾರದು ನೊಂದ ಸಾವಿರಾರು ಕಾರ್ಯಕರ್ತರ ದನಿಯಾಗಿ ನಾನು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಆಕ್ರೋಶದ ಮಾತುಗಳನ್ನಾಡಿದರು.

ನಾನು ಮೋದಿ ವಿರುದ್ಧ ಹೋಗುತ್ತಿಲ್ಲ. ನನ್ನ ಹೃದಯದಲ್ಲಿ ರಾಮ ಮತ್ತು ಮೋದಿ ಅವರು ಇದ್ದಾರೆ. ಯಡಿಯೂರಪ್ಪ ಅವರ ಹೃದಯದಲ್ಲಿ ಇಬ್ಬರು ಮಕ್ಕಳು ಮತ್ತು ಶೋಭಾ ಇರುವುದು ಎಂದು ಕಿಡಿ ಕಾರಿದರು.

ಯಡಿಯೂರಪ್ಪ ಅವರೇ ಮನೆಗೆ ಹೋದಾಗ ಹಾವೇರಿ ಟಿಕೆಟ್ ಕೊಡಿಸಿ ಗೆಲ್ಲಿಸಲು ಓಡಾಡುತ್ತೇನೆ ಎಂದು ಭರವಸೆ ನೀಡಿದ್ದರು.ಆದರೆ ಬೊಮ್ಮಾಯಿ ಅವರಿಗೆ ಟಿಕೆಟ್ ಕೊಡಬೇಕು ಎಂದು ಹಠ ಹಿಡಿದಿದ್ದಾರೆ ಎಂಬ ವರದಿ ಬಂತು. ಇನ್ನೊಂದೆಡೆ ಶೋಭಾ ಕರಂದ್ಲಾಜೆ ಅವರಿಗೆ ಉಡುಪಿ-ಚಿಕ್ಕಮಗಳೂರು ಟಿಕೆಟ್ ಕೊಡಿಸಲು ಹಠ ಹಿಡಿದಿದ್ದಾರೆ ಎಂದು ಟಿವಿಗಳಲ್ಲಿ ವರದಿ ಬಂತು. ನರೇಂದ್ರ ಮೋದಿಯವರ ಮಾತು ಕೇಳಬೇಕೋ ಬೇಡವೋ ನೀವು ತೀರ್ಮಾನ ಮಾಡಿ, ಪ್ರಾಣ ಹೋದರೂ ನಾನು ಮೋದಿಯವರನ್ನು ವಿರೋಧ ಮಾಡಲು ಸಾಧ್ಯವಿಲ್ಲ ಎಂದರು.

ಮೋದಿ ಪ್ರಧಾನಿಯಾಗುವ ಮೊದಲು ವಿಚಿತ್ರ ಪರಿಸ್ಥಿತಿ ದೇಶದಲ್ಲಿತ್ತು, ಪ್ರಪಂಚದ ಹೆಚ್ಚಿನ ರಾಷ್ಟ್ರಗಳು ಪಾಕಿಸ್ಥಾನ ದೊಂದಿಗೆ ಇದ್ದವು, ವೀಸಾ ರದ್ದು ಮಾಡಿದವರೂ ಸೇರಿ ಎಲ್ಲ ರಾಷ್ಟ್ರಗಳೂ ನಮ್ಮ ದೇಶಕ್ಕೆ ಬನ್ನಿ ಎಂದು ಮೋದಿ ಅವರನ್ನು ಕರೆಯುತ್ತಿದ್ದಾರೆ. ಮುಸ್ಲಿಂ ರಾಷ್ಟ್ರಗಳೂ ಮೋದಿಯವರನ್ನು ಸ್ವಾಗತಿಸುತ್ತಿವೆ. ಪಾಕಿಸ್ಥಾನ ಈಗ ಒಂಟಿಯಾಗಿದೆ ಎಂದರು.

ಬಿಜೆಪಿಯಲ್ಲೂ ಕಾಂಗ್ರೆಸ್ ಸಂಸ್ಕೃತಿ ಬಂದಿದೆಯಾ? ಎಂದು ಪ್ರಶ್ನಿಸಿದರು. ನೊಂದ ಕಾರ್ಯಕರ್ತರು ಇದ್ದಾರೆ. ಚುನಾವಣೆಗೆ ನಿಲ್ಲಬೇಡ ಎಂದಾಗ ಮೋದಿ ಅವರು ಕರೆ ಮಾಡಿದ್ದರು. ಒಂದು ಕುಟುಂಬದ ಹಿಡಿತದಲ್ಲಿ ಕರ್ನಾಟಕ ಬಿಜೆಪಿ ಸಿಗಬಾರದು , ಹಿಂದುತ್ವದ ಹೋರಾಟಗಾರಿಗೆ ನ್ಯಾಯ ಸಿಗಬೇಕು. ನನಗಾಗಿ ನೀವು ಸಮಯ ನೀಡಬೇಕು ಎಂದು ಬೆಂಬಲಿಗರಿಗೆ ಮನವಿ ಮಾಡಿದರು.ಟಿಕೆಟ್ ಕೊಟ್ಟ ಬಿಜೆಪಿ ಅಭ್ಯರ್ಥಿಗಳಿಗೂ, ನನಗೂ ಹೋಲಿಕೆ ಮಾಡಿ, ಎಲ್ಲರಿಗಿಂತ ಮೋದಿ ಅವರ ಮೇಲೆ ನನ್ನ ಅಭಿಮಾನ ಗುಲಗಂಜಿಗಿಂತ ಸ್ವಲ್ಪ ಹೆಚ್ಚಿರಬಹುದು ಎಂದು ಹೇಳಿದರು.

ಮಾತಿನ ಕೊನೆಯಲ್ಲಿ ನನ್ನನ್ನು ಗೆಲ್ಲಿಸಿ ಮೋದಿ ಅವರಿಗೆ ಬೆಂಬಲ ಸೂಚಿಸಿ,ನೊಂದ ಬಿಜೆಪಿ ಹಿಂದೂ ಪರ ಕಾರ್ಯಕರ್ತರ ದನಿಯಾಗಿ ಎಂದು ನರೇಂದ್ರ ಮೋದಿ, ಭಾರತ್ ಮಾತಾಕಿ ಜೈ ಎಂದು ಘೋಷಣೆ ಕೂಗಿದರು.

ನೂರಾರು ಮುಖಂಡರು, ವಿವಿಧ ಸಮುದಾಯದ ಮುಖಂಡರು ಹಾಗೂ ಮಾಜಿ ಪಾಲಿಕೆ ಸದಸ್ಯರು ಸಭೆಯಲ್ಲಿ ಹಾಜರಿದ್ದು ಈಶ್ವರಪ್ಪ ಅವರಿಗೆ ಬೆಂಬಲ ಸೂಚಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

8 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

8 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

12 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

14 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

15 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago