ಶಿವರಾಜ್​ಕುಮಾರ್​ ಸಿನಿಮಾಗಳನ್ನು ಬ್ಯಾನ್​ ಮಾಡಲು ಆಗ್ರಹ – ಚುನಾವಣಾ ಆಯೋಗ ಹೇಳಿದ್ದೇನು..??? | Election

ಶಿವರಾಜ್​ಕುಮಾರ್​ ಸಿನಿಮಾಗಳನ್ನು ಬ್ಯಾನ್​ ಮಾಡಲು ಆಗ್ರಹ – ಚುನಾವಣಾ ಆಯೋಗ ಹೇಳಿದ್ದೇನು..???


ನಟ ಶಿವರಾಜ್​ಕುಮಾರ್ ಅವರ ಸಿನಿಮಾಗಳು ಮತ್ತು ಜಾಹೀರಾತುಗಳು ಖಾಸಗಿ ಟಿವಿ ಚಾನೆಲ್​ಗಳಲ್ಲಿ ಪ್ರಸಾರವಾಗುವುದನ್ನು ನಿಷೇಧಿಸಲು ಸಾಧ್ಯವಿಲ್ಲ, ದೂರದರ್ಶನದಲ್ಲಿ ಮಾತ್ರ ಪ್ರಸಾರವನ್ನು ನಿರ್ಬಂಧಿಸಬಹುದು ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಶಿವಮೊಗ್ಗ ಕ್ಷೇತ್ರದಿಂದ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ಪುತ್ರ ಹಾಗೂ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ಮಾಜಿ ಸಿಎಂ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್​ಕುಮಾರ್​ ಅವರ ಧರ್ಮಪತ್ನಿ ಗೀತಾ ಶಿವರಾಜ್​​ಕುಮಾರ್​ ಅವರು ಕಾಂಗ್ರೆಸ್​ನಿಂದ ಕಣಕ್ಕಿಳಿದಿದ್ದಾರೆ. ಶಿವರಾಜ್​ಕುಮಾರ್​ ಕೂಡ ತಮ್ಮ ಪತ್ನಿ ಪರವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ಇದರ ನಡುವೆ ಚುನಾವಣೆ ಮುಗಿಯುವವರೆಗೂ ಶಿವರಾಜ್​ಕುಮಾರ್ ಅವರ ಸಿನಿಮಾಗಳು ಮತ್ತು ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ತಡೆಯಬೇಕೆಂದು ಕೋರಿ​ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ಆರ್​. ರಘು ಎಂಬುವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಯೋಗ ಉತ್ತರ ನೀಡಿದೆ.

ಚುನಾವಣಾ ಆಯೋಗ ಹೇಳಿದ್ದೇನು?

ಚುನಾವಣೆಯಲ್ಲಿ ಸ್ಪರ್ಧಿಸುವ ನಟರನ್ನು ಒಳಗೊಂಡಂತಹ ಚಲನಚಿತ್ರಗಳು ಮತ್ತು ಜಾಹೀರಾತುಗಳ ಪ್ರಸಾರವನ್ನು ಖಾಸಗಿ ಟಿವಿ ಚಾನೆಲ್‌ಗಳು ಅಥವಾ ಚಿತ್ರಮಂದಿರಗಳಲ್ಲಿ ನಿರ್ಬಂಧಿಸಲಾಗುವುದಿಲ್ಲ ಎಂದು ಭಾರತೀಯ ಚುನಾವಣಾ ಆಯೋಗದ ನಿರ್ದೇಶನವನ್ನು ರಾಜ್ಯ ಚುನಾವಣಾ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಆದಾಗ್ಯೂ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ದೂರದರ್ಶನದಲ್ಲಿ ಚಲನಚಿತ್ರಗಳ ಪ್ರಸಾರಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಹೇಳಿದೆ.


ಅಂದಹಾಗೆ ಗೀತಾ ಶಿವರಾಜ್​ಕುಮಾರ್​ ಅವರಿಗೆ ಶಿವಮೊಗ್ಗ ಕ್ಷೇತ್ರದಲ್ಲಿ ಇದು ಎರಡನೇ ಪ್ರಯತ್ನವಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿರುದ್ಧ ಸ್ಫರ್ಧಿಸಿ ಸೋಲುಂಡಿದ್ದರು. ಆದರೆ, ಈ ಬಾರಿ ಬಿಎಸ್​ವೈ ಪುತ್ರ ರಾಘವೇಂದ್ರಗೆ ಗೀತಾ ಅವರು ಕಠಿಣ ಸ್ಪರ್ಧೆ ಕೊಡುವ ಸಾಧ್ಯತೆ ಇದೆ. ಏಕೆಂದರೆ, ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರವಿದೆ ಮತ್ತು ತಮ್ಮ ಸಹೋದರ ಮಧು ಬಂಗಾರಪ್ಪ ಶಿಕ್ಷಣ ಸಚಿವರಾಗಿದ್ದು, ಶಿವಮೊಗ್ಗ ಜಿಲ್ಲೆಯ ಉಸ್ತುವರಿಯು ಆಗಿದ್ದಾರೆ. ಹೀಗಾಗಿ ಈ ಬಾರಿ ಗೀತಾ ಅವರ ಗೆದ್ದರೆ ಅಚ್ಚರಿಪಡಬೇಕಿಲ್ಲ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

2 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

6 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

6 hours ago

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ Private bus loses control and…

6 hours ago

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ – 19 ವರ್ಷದ ಯುವಕ ಸ್ಥಳದಲ್ಲೇ ಸಾವು

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ - 19 ವರ್ಷದ ಯುವಕ ಸ್ಥಳದಲ್ಲೇ ಸಾವು 19-year-old Arjun…

8 hours ago

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

1 day ago