ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ
110/33/11ಕೆ.ವಿ. ಸಾಗರ ವಿ.ವಿ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಹಿನ್ನಲೆಯಲ್ಲಿ 10.03.2024 ರಂದು ಭಾನುವಾರ ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
10.03.2024 ರಂದು ಬೃಹತ್ ಕಾಮಗಾರಿ ವಿಭಾಗ, ಶಿವಮೊಗ್ಗ ಇವರು ರೇಲ್ವೆ ಟ್ರ್ಯಾಕ್ಷನ್ ಕಾಮಗಾರಿಗೆ ಸಂಬಂಧಿಸಿದಂತೆ ಹೊಸದಾಗಿ ನಿರ್ಮಿಸುತ್ತಿರುವ 110 ಕೆವಿ ಮಾರ್ಗವನ್ನು 110 ಕೆವಿ ಬಸ್ ಬಾರ್ ಗೆ ಜೋಡಿಸುವ ಕಾಮಗಾರಿಯ ಹಿನ್ನಲೆಯಲ್ಲಿ 110 ಕೆವಿ ಬಸ್ ಬಾರ್ ನ ಮಾರ್ಗ ಮುಕ್ತತೆ ಪಡೆಯಲಿರುತ್ತಾರೆ, ಆದುದರಿಂದ ವಿ.ವಿ ಕೇಂದ್ರಕ್ಕೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಇರುತ್ತದೆ ಆದ್ದರಿಂದ 10.03.2024 ರಂದು ಭಾನುವಾರ ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವುಂಟಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ :
ಸಾಗರ , ಆನಂದಪುರ , ರಿಪ್ಪನ್‌ಪೇಟೆ ಹಾಗೂ ಹೊಸನಗರ ,ಆವಿನಹಳ್ಳಿ, ಮಾಸೂರು ,ಸಾಗರ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವುಂಟಾಗಲಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್