ಸಾಮಾಜಿಕ ಜಾಲತಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಹುಂಚದ ಯುವಕನ ಮೇಲೆ ಸುಮೋಟೋ ಕೇಸ್ ದಾಖಲು|suo moto

ಸಾಮಾಜಿಕ ಜಾಲತಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಹುಂಚದ ಯುವಕನ ಮೇಲೆ ಸುಮೋಟೋ ಕೇಸ್ ದಾಖಲು


ರಿಪ್ಪನ್‌ಪೇಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ(siddaramayya) ನವರನ್ನು ಅವಹೇಳನ ಮಾಡುವ ಉದ್ದೇಶದಿಂದ ಅವರ ಫೋಟೊವನ್ನ ಮಾರ್ಫಿಂಗ್(morphing) ಮಾಡಿ ಲೇವಡಿ ರೀತಿ ಬಿಂಬಿಸಿದ ವ್ಯಕ್ತಿಯ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.

ಇನ್ಸ್ಟಾಗ್ರಾಂ(Instagram) ಹಾಗೂ ಫೇಸ್‌ಬುಕ್‌(facebook)ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಫೋಟೋಗಳನ್ನು ಮಾರ್ಫಿಂಗ್ ಮಾಡಿ ಪೋಸ್ಟ್ ಮಾಡಿದ್ದು, ಇನ್ಸ್ಟಾಗ್ರಾಂ ಹಾಗೂ ಫೇಸ್‍ಬುಕ್ ಅನ್ನು ಪರಿಶೀಲನೆ ಮಾಡಿದ ಪೊಲೀಸರಿಗೆ ಮಾ.16 ರಂದು ಹುಂಚ ಗ್ರಾಮದ ಸುಬ್ರಹ್ಮಣ್ಯ @ ಸುಬ್ಬು @ ಕನ್ನಡದ ಜಾಗ್ವಾರ್ ಎಂಬುವವರು ತಮ್ಮ ಸೋಷಿಯಲ್ ಮೀಡಿಯಾದ ಐಡಿಯಲ್ಲಿ ಅಶ್ಲೀಲವಾಗಿ ಪೋಸ್ಟ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.


ಸಿಎಂ ಸಿದ್ದರಾಮಯ್ಯ ರವರ ಬೆತ್ತಲೆ ಭಾವಚಿತ್ರ ಹಾಗೂ ಟಿಪ್ಪು ಸುಲ್ತಾನ್ ರ ಬೆತ್ತಲೆ ಭಾವಚಿತ್ರ ರಚಿಸಿ ಅದರಲ್ಲಿ ಸಿದ್ದರಾಮಯ್ಯ ರವರು ಟಿಪ್ಪುಸುಲ್ತಾನ್ ರ ಗಲೀಜ್ ತೊಳೆಯುತ್ತಿರುವ ಹಾಗೆ ಇರುವ ಭಾವಚಿತ್ರವಿದೆ.‌ ಅದರ ಮೇಲ್ಭಾಗದಲ್ಲಿ “ನಂಗೇನ್ ಗೊತ್ತಿಲ್ಲಪ್ಪ ” ಅಂತ ಬರೆಯಲಾಗಿದೆ. ಇನ್ನೊಂದು ಭಾವಚಿತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕಪ್ಪನೆ ಬಣ್ಣದ ಬುರ್ಕಾ ಧರಿಸಿರುವಂತಹ ಭಾವಚಿತ್ರವಿದ್ದು ಇವುಗಳನ್ನು ತಮ್ಮ ಫೇಸ್‍ಬುಕ್ ಐಡಿಯಲ್ಲಿ ಫೋಸ್ಟ್ ಮಾಡಲಾಗಿತ್ತು.


ಹುಂಚ ಗ್ರಾಮದ ಸುಬ್ರಹ್ಮಣ್ಯ @ ಸುಬ್ಬು @ ಕನ್ನಡದ ಜಾಗ್ವಾರ್ ಎಂಬುವವರು ಸಿದ್ದರಾಮಯ್ಯ ರವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯೆಂದು ಗೊತ್ತಿದ್ದರೂ ಸಹಾ ಅವರ ಖ್ಯಾತಿಗೆ ಕುಂದುಂಟು ಮಾಡುವ ಉದ್ದೇಶದಿಂದ ಸರ್ಕಾರದ ಪ್ರಜಾ ಪ್ರತಿನಿಧಿಗಳ ವಿರುದ್ಧ ಅಶ್ಲೀಲ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್ ಹಾಗೂ ಇನ್ಸ್ಟಾಗ್ರಾಂ ಗಳಲ್ಲಿ ಪೋಸ್ಟ್ ಮಾಡಿ ಅವಹೇಳನಗೊಳಿಸಿರುತ್ತಾರೆ.

ಇವರ ಮೇಲೆ ಕಾನೂನು ಕ್ರಮ ಜರುಗಿಸಲು ಮುಂದಿನ ಕ್ರಮಕ್ಕಾಗಿ ಸುಮೋಟೋ ಕೇಸ್ ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

42 minutes ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

50 minutes ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

59 minutes ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

4 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

7 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

8 hours ago