ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ
ಶಿವಮೊಗ್ಗ : ಹಾಡಹಗಲೇ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನಿಸಿದ ಘಟನೆ ನಗರದ ರಾಯಲ್ ಆರ್ಕೀಡ್ ಹೊಟೆಲ್ ನ ಹಿಂಭಾಗದ ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ.
ಕಾರ್ತಿಕ್ (48) ಹಲ್ಲೆಗೊಳಗಾದ ವ್ಯಕ್ತಿ. ಇನ್ನು ಗಾಯಗೊಳಗಾದ ಯುವಕನನ್ನು ಕೂಡಲೇ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇಂದು ಮದ್ಯಾಹ್ನ 12.30 ರ ಆಸುಪಾಸಿನಲ್ಲಿ ಈ ಘಟನೆ ನಡೆದಿದ್ದು, ಕಾರ್ತಿಕ್ ಎನ್ನುವ ವ್ಯಕ್ತಿಯು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಇಬ್ಬರು ಅಪರಿಚಿರಲ್ಲಿ ಒಬ್ಬನು ಭರ್ಚಿಯಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ.
ಈ ವೇಳೆ ಕಾರ್ತಿಕ್ ಭರ್ಚಿ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದ್ರೆ, ಭರ್ಚಿ ಕೊನೆಗೂ ಆತನ ಕೈ ಭಾಗಕ್ಕೆ ತಗುಲಿದೆ. ಕೈಗೆ ಭರ್ಚಿ ಇರಿತದಿಂದ ತೀವ್ರ ರಕ್ತಸ್ರಾವ ಆಗಿದೆ. ತಕ್ಷಣ ಸ್ಥಳೀಯರು ದೊಡ್ಡಪೇಟೆ ಪೊಲೀಸರಿಗೆ ದಾಳಿ ಕುರಿತು ಮಾಹಿತಿ ನೀಡಿದ್ದಾರೆ. ಗಾಯಾಳು ಕಾರ್ತಿಕ್ನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ದೊಡ್ಡ ಗಂಡಾಂತರಿಂದ ಕಾರ್ತಿಕ್ ಪಾರಾಗಿದ್ದಾನೆ.
ನಗರದ ಹೃದಯ ಭಾಗದಲ್ಲಿ ಕೊಲೆಗೆ ಯತ್ನ ನಡೆದಿದ್ದು, ಈ ಘಟನೆ ನೋಡಿದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಅಷ್ಟಕ್ಕೂ ಕಾರ್ತಿಕ್ ಮೇಲೆ ಭರ್ಚಿಯಿಂದ ದಾಳಿ ಮಾಡಿದವರು ಯಾರು?, ಈತನ ಕೊಲೆಗೆ ಅವರು ಯತ್ನಿಸಿದ್ದು ಯಾಕೆ?, ಈ ಎಲ್ಲವೂ ಕೂಡ ನಿಗೂಢವಾಗಿದೆ. ಸದ್ಯ ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.
ಭರ್ಚಿ ಇರಿದ ಮತ್ತು ಆತನಿಗೆ ಸಾಥ್ ಕೊಟ್ಟ ಇಬ್ಬರಿಗಾಗಿ ದೊಡ್ಡಪೇಟೆ ಪೊಲೀಸರು ಹುಡುಕಾಟದಲ್ಲಿದ್ದಾರೆ. ದಾಳಿಗೊಳಗಾದ ವ್ಯಕ್ತಿಗಳ ಪತ್ತೆಗೆ ತನಿಖೆ ಮುಂದುವರೆಸಿದ್ದಾರೆ. ಹಳೇ ವೈಷಮ್ಯದ ಹಿನ್ನಲೆಯಲ್ಲಿ ಈತನ ಮೇಲೆ ದಾಳಿ ನಡೆಸಿರುವ ಸಾಧ್ಯತೆ ಇರಬಹುದು ಎನ್ನುವುದು ಪೊಲೀಸರ ಅನುಮಾನವಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್