ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ
ಹೊಸನಗರ : ಇಲ್ಲಿನ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಮೀಜ್’ರಾಜ ಶೇಖ್ ರವರಿಗೆ ಅಹ್ಮದಾಬಾದ್ ನಲ್ಲಿ ನಡೆದ ಎರಡನೇ ಆಲ್ ಇಂಡಿಯಾ ಫೈರ್ ಸರ್ವಿಸ್ ಅಂಡ್ ಫೈರ್ ಸರ್ವಿಸ್ ಸ್ಪೋರ್ಟ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಬಡ್ಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕವನ್ನು ಹಾಗೂ 4X100 ಮೀಟರ್ಸ್ ರಿಲೇ ಓಟದಲ್ಲಿ ಕಂಚಿನ ಪದಕವನ್ನು ಗಳಿಸಿ ಮಲೆನಾಡಿನ ಕೀರ್ತಿಪತಾಕೆಯನ್ನು ಉತ್ತುಂಗಕ್ಕೇರಿಸಿದ್ದಾರೆ.
ಅಗ್ನಿಶಾಮಕ ಮತ್ತು ತುರ್ತು ಸೇವಾ ಮಹಾ ನಿರ್ದೇಶಕರು, ಗೃಹ ರಕ್ಷಕ ದಳದ ಮಹಾ ಸಮಾದೇಷ್ಟರು, ರಾಜ್ಯ ವಿಪತ್ತು ಸ್ಪಂದನಾ ಪಡೆ ಹಾಗೂ ಪೌರ ರಕ್ಷಣ ನಿರ್ದೇಶಕರು ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್ ರವರು ರಮೀಜ್’ರಾಜ ಶೇಖ್ ರವರನ್ನು ಪ್ರಶಂಷನ ಪತ್ರ ನೀಡಿ ಅಭಿನಂದಿಸಿ ಅಂತರಾಷ್ಟ್ರೀಯ ಮಟ್ಟದಲ್ಲೂ ಭಾಗವಹಿಸಿ ಉತ್ತಮ ಸಾಧನೆ ಗಳಿಸುವಂತೆ ಅವರು ಹಾರೈಸಿದ್ದಾರೆ.
ಹೊಸನಗರ ಅಗ್ನಿಶಾಮಕ ದಳ ಠಾಣೆಯ ಸಿಬ್ಬಂದಿ ವರ್ಗದವರು ಅವರ ಸಾಧನೆಗಾಗಿ ಅಭಿನಂದಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್