Headlines

5,8 ಮತ್ತು 9ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ..!!ಗೊಂದಲದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು

5,8 ಮತ್ತು 9ನೇ ತರಗತಿಗಳಿಗೆ ಕರ್ನಾಟಕ ಸರ್ಕಾರ ನಡೆಸುತ್ತಿರುವ ಬೋರ್ಡ್ ಪರೀಕ್ಷೆಗಳನ್ನು ನಡೆಸದಂತೆ ನ್ಯಾಯಮೂರ್ತಿಗಳಾದ ಬೆಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠ ತಡೆ ನೀಡಿದೆ.


5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು.

ಇದನ್ನು ಪ್ರಶ್ನಿಸಿದ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಸಿತ್ತು. ಅದರಂತೆ, ವಿಚಾರಣೆ ನಡೆಸಿದ ಹೈಕೋರ್ಟ್​ ವಿಭಾಗೀಯ ಪೀಠ, ವಾದ ಪ್ರತಿವಾದ ಆಲಿಸಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ರೂಪ್ಸಾ ಮತ್ತು ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ ಈಗಾಗಲೇ ನಡೆಯುತ್ತಿರುವ ಪರೀಕ್ಷೆ ಮುಂದೂಡಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಆದೇಶ ಹೊರಡಿಸಿದ್ದಾರೆ.

ಮುಂದೇನು..!!??

ಸದ್ಯದ ಸೂಚನೆ ಪ್ರಕಾರ, ಈಗ ನಡೆಯುತ್ತಿರುವ ಪರೀಕ್ಷೆಯನ್ನು ಮುಂದೂಡುವಂತೆ ಸುಪ್ರೀಂಕೋರ್ಟ್‌ ಸೂಚಿಸಿದೆ.

ಮುಂದಿನ ಆದೇಶದ ವರೆಗೆ ಪರೀಕ್ಷೆಗಳನ್ನು ಮುಂದೂಡುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ ಮಧ್ಯಂತರ ಆದೇಶದ ಬಗ್ಗೆ ತ್ವರಿತ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಹೈಕೋರ್ಟ್‌ಗೆ ಸೂಚಿಸಿದೆ.

ಹೈಕೋರ್ಟ್‌ ವಿಚಾರಣೆಯ ವೇಳೆ ಹೈಕೋರ್ಟ್‌ ಸ್ವಂತ ವಿವೇಚನೆಯನ್ನು ಬಳಸಲಿ ಮತ್ತು ಸುಪ್ರೀಂಕೋರ್ಟ್‌ನ ಅಭಿಪ್ರಾಯಗಳಿಂದ ಪ್ರಭಾವಿತವಾಗದಿರಲಿ ಎಂದು ಹೇಳಿದೆ.

ಅಂದರೆ ಹೈಕೋರ್ಟ್‌ನ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿ ತನ್ನ ತೀರ್ಪನ್ನು ನೀಡಬಹುದಾಗಿದೆ. ಮತ್ತು ಇದು ಅಂತಿಮವಾಗಿರುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

Exit mobile version