Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು
ಬೊಲೆರೋ ಮತ್ತು ಸ್ಕೂಟಿ ಮಧ್ಯೆ ಒಂದು ರಸ್ತೆ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಜ್ಜಂಪುರ ತಾಲ್ಲೂಕಿನ ಹಿರೇಕಾನವಂಗಲ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ತಾಲ್ಲೂಕಿನ ಸಿದ್ಧಾಪುರ ಗ್ರಾಮದ
ಅರ್ಜುನ್ ಹಾಗೂ ಶ್ವೇತಾ ಮೃತಪಟ್ಟ ದುರ್ದೈವಿ ದಂಪತಿಗಳು ಎಂದು ತಿಳಿದು ಬಂದಿದೆ.
ಊರಿನಿಂದ ಅಜ್ಜಂಪುರಕ್ಕೆ ಸಂಬಂಧಿಕರ ಮನೆಗೆ ದಂಪತಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಬೊಲೆರೋ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಸ್ಕೂಟಿ ಸವಾರಿ ಮಾಡುತ್ತಿದ್ದ ಅರ್ಜುನ್ ಹೆಲ್ಮೆಟ್ ಧರಿಸಿರಲಿಲ್ಲ ಹಾಗೂ ಕಾರು ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಬೊಲೆರೋ ಚಾಲಕ ದಾವಣಗೆರೆ ಮೂಲದವನು ಎನ್ನಲಾಗುತ್ತಿದ್ದು, ಚಾಲಕನನ್ನು ಬಂಧಿಸಿರುವ ಅಜ್ಜಂಪುರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ದಂಪತಿಗಳು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಆಸ್ಪತ್ರೆ ಬಳಿ ಜನರು ಜಮಾಯಿಸಿದ ಕಾರಣ ಮುಖ್ಯ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್