ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಮ್ಮನ ಘಟ್ಟ ತಿರುವಿನ ಬಳಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.
ಇಂದು ಬೆಳಗಿನಜಾವ ಮಂಗಳೂರಿನಿಂದ ಬಳ್ಳಾರಿ ಜಿಲ್ಲೆ ಕೂಡ್ಲಿಗಿಗೆ ಇಂಧನ ತುಂಬಿಸಿಕೊಂಡು ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು ದುರಂತ ಸಂಭವಿಸಿದೆ.
ಘಟನೆ ನಡೆದ ಸ್ಥಳದ ಸಮೀಪದಲ್ಲೇ ಕೋಡೂರು ಪೆಟ್ರೋಲ್ ಬಂಕ್ ಇದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಹೊಸನಗರ ಅಗ್ನಿಶಾಮಕ ದಳದ ಸಿಬ್ಬಂದಿಯವರು ಮುಂದಾಗಬಹುದಾಗಿದ್ದ ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.