w
Headlines
Home » Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು

Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು

Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು


ಆನಂದಪುರ : ಇಲ್ಲಿನ ಸಮೀಪದ ಹೊಸಕೊಪ್ಪ ಬಳಿಯಲ್ಲಿ ಬೈಕ್ ಸವಾರ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದಾನೆ.

ಮೆಣಸಿನಸರ  ಗ್ರಾಮದ ನಿವಾಸಿ ಷಣ್ಮುಖಪ್ಪ ( 65 ) ಮೃತಪಟ್ಟ ದುರ್ಧೈವಿಯಾಗಿದ್ದಾರೆ.

ಸೋಮವಾರ ಸಂಜೆ ಹೊಸಕೊಪ್ಪ ತಿರುವಿನಲ್ಲಿ ಈ ಅಪಘಾತ ನಡೆದಿದ್ದು ತಕ್ಷಣ ಗಾಯಾಳುಗಳನ್ನು ಆನಂದಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಪಘಾತದಲ್ಲಿ ವಿರೂಪಾಕ್ಷಪ್ಪ ಹಾಗೂ ಷಣ್ಮುಖಪ್ಪ ಎಂಬವರಿಗೆ ತೀವ್ರ ಗಾಯವಾಗಿತ್ತು. ಆದರೆ ಮೆಣಸಿನಸರ  ಗ್ರಾಮದ ನಿವಾಸಿ ಷಣ್ಮುಖಪ್ಪ ( 65 ) ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಸಾವನ್ನಪ್ಪಿದ್ದಾರೆ.

ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.