Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್
ಇತ್ತೀಚೆಗೆ ಜನಸಾಮಾನ್ಯರನ್ನು ರಕ್ಷಣೆ ಮಾಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಸದ್ಯ ಪೊಲೀಸರ ಮೇಲೆಯೇ ಕೆಲವು ಪುಂಡರು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಆನಂದಪುರದ(Anandapura) ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ನಡೆದಿದೆ.
ಜಾತ್ರೆಯಲ್ಲಿ ಅಂಗಡಿ ಮುಂಗಟ್ಟು ಬಳಿ ಗಲಾಟೆ ಮಾಡುತ್ತಿರುವುದನ್ನು ತಡೆಯಲು ಹೋದ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂದಪುರ ಪೊಲೀಸ್ ಠಾಣೆ ಸಿಬ್ಬಂದಿ ಕಿರಣ್ ಎಂಬುವವರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ.
ಇನ್ನೂ ಹಲ್ಲೆ ಮಾಡುತ್ತಿರುವ ದೃಶ್ಯಗಳು ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಸ್ಥಳೀಯರು ಪೊಲೀಸರನ್ನ ಗುಂಪಿನ ಯುವಕರಿಂದ ಬಿಡಿಸುತ್ತಿರುವ ದೃಶ್ಯಗಳಿದ್ದು, ಹಲ್ಲೆ ಮಾಡುತ್ತಿರುವ ಯುವಕನ ಚಹರೆಯು ರೆಕಾರ್ಡ್ ಆಗಿದೆ. ಈ ಸಂಧರ್ಭದಲ್ಲಿ
ಖಾಕಿ ಹಿಡಿದು ಎಳೆದಾಡಿದ್ದಲ್ಲದೇ ಕಪಾಳಕ್ಕೆ ಹೊಡೆದಿದ್ದಾರೆ.
ನಂತರದಲ್ಲಿ ಯುವಕರ ಗುಂಪು ತಮ್ಮ ತಂಟೆಗೆ ಬಂದರೆ ಹುಷಾರ್ ಎಂದು ಪೊಲೀಸರನ್ನ ಹೆದರಿಸಿದ್ದಾರೆ ಎಂದು ಸ್ಥಳೀಯರು ಹೇಳುತ್ತಾರೆ.
ಇಂತಹ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ಗಂಭೀರ ಹೆಜ್ಜೆ ಇಡಬೇಕಾಗುತ್ತದೆ. ಆ ನಿಟ್ಟಿನಲ್ಲಿ ಆನಂದಪುರದ ಪೊಲೀಸ್ ಸ್ಟೇಷನ್ ಪೊಲೀಸರು ಗಮನ ಹರಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.