Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ  – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು


ರಿಪ್ಪನ್ ಪೇಟೆ : ಮಲೆನಾಡಿನ ವಿದ್ಯಾರ್ಥಿಗಳು ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪೋಷಕರ,ಶಿಕ್ಷಕರ ಹಾಗೂ ತಮ್ಮ ಪ್ರತಿಭೆಯ ಸಹಕಾರದಿಂದ ಉನ್ನತ ಶಿಕ್ಷಣವನ್ನು ಪಡೆದು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಅಂತ ಮಲೆನಾಡಿನಲ್ಲಿ ಕೆಲ ಕಿಡಿಗೇಡಿಗಳ ವಿದ್ಯಾರ್ಥಿಗಳ ಪುಂಡಾಟಿಕೆಯ ಅಟ್ಟಹಾಸದಿಂದ ಪೋಷಕರು ಶಿಕ್ಷಕರು ಬೆಚ್ಚಿ ಬಿದ್ದಿದ್ದಾರೆ ಹಾಗೂ ಗ್ರಾಮಸ್ಥರು ಮರ್ಯಾದೆಗೆ ಅಂಜಿ ತಲೆ ಬಾಗಿಸುವಂಥಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಹೆದ್ದಾರಿಪುರ ಪ್ರೌಢ ಶಾಲೆಯಲ್ಲಿ ನಡೆದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಮುನ್ನ ಕೆಲ ಕಿಡಿಗೇಡಿ ವಿದ್ಯಾರ್ಥಿಗಳ ದಾಂದಲೆಯಿಂದ ತರಗತಿಯಲ್ಲಿನ ಕುರ್ಚಿ, ಟ್ಯೂಬ್ ಲೈಟ್, ಫ್ಯಾನ್ , ಹಂಚು, ಕಿಟಕಿ ಬಾಗಿಲು, ಕ್ಷಣಮಾತ್ರದಲ್ಲಿ ಪೀಸ್ ಪೀಸ್ ಆಗಿದೆ.

ಪುಂಡ ವಿದ್ಯಾರ್ಥಿಗಳ ಅಟ್ಟಹಾಸದಿಂದ ಶಾಲೆಯ ಮರ್ಯಾದೆ ಹೋಗುತ್ತದೆ ಹಾಗೂ ಸೋಮವಾರದಿಂದ ಪ್ರಾರಂಭವಾಗುವ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂದು ಶಾಲಾ ಅಭಿವೃದ್ಧಿ ಸಮಿತಿಯವರು, ಶಿಕ್ಷಕರುಗಳು ಗ್ರಾಮಸ್ಥರು ಶನಿವಾರ ಶಾಲೆಯಲ್ಲಿ ಸಭೆ ಕರೆದು ಪೀಠೋಪಕರಣಗಳನ್ನು ಹಾಳು ಮಾಡಿದ ಪುಂಡ ವಿದ್ಯಾರ್ಥಿಗಳಿಗೆ  ಹಾಗೂ ಪೋಷಕರುಗಳಿಗೆ ಬುದ್ಧಿ ಹೇಳಿ ಕಳಿಸಿದ್ದಾರೆ.


ತಾವುಗಳು ಮಾಡಿದ ದಾಂದಲೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಿ ಪುಂಡ ವಿದ್ಯಾರ್ಥಿಗಳು ಅಪ್ಲೋಡ್ ಮಾಡಿದ್ದಾರೆ. ಅದೀಗ ವೈರಲ್ ಆಗಿ ಲೈಕ್ ಜೊತೆಗೆ ಶಾಲೆಯ ಮಾನವು ಹರಾಜು ಆಗುತ್ತಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

3 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

6 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

7 hours ago

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ Private bus loses control and…

7 hours ago

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ – 19 ವರ್ಷದ ಯುವಕ ಸ್ಥಳದಲ್ಲೇ ಸಾವು

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ - 19 ವರ್ಷದ ಯುವಕ ಸ್ಥಳದಲ್ಲೇ ಸಾವು 19-year-old Arjun…

9 hours ago

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

1 day ago