Hosanagara | ಅಡಿಕೆ ತೋಟಕ್ಕೆ ಔಷದಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು – ಸೂಕ್ತ ಪರಿಹಾರಕ್ಕೆ ಆಗ್ರಹ

ಅಡಿಕೆ ತೋಟಕ್ಕೆ ಔಷದಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು 

ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡೇನಕೊಪ್ಪ  ಗ್ರಾಮದ ಗಣೇಶ್ ಪೂಜಾರಿ ಎಂಬುವವರು ಅಡಿಕೆ ತೋಟಕ್ಕೆ ಕ್ರಿಮಿನಾಶಕ ಸಿಂಪಡಿಸುತ್ತಿದ್ದಾಗ ತಲೆ ಸುತ್ತು ಬಂದು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ.

ರೈತ ಗಣೇಶ್ ಪೂಜಾರಿ ಔಷಧಿ ಸಿಂಪಡಣೆ ಮಾಡುವಾಗ ಅಸ್ವಸ್ಥಗೊಂಡಿದ್ದು ತಕ್ಷಣವೇ ಅವರನ್ನು ಕುಟುಂಬದವರು ಹೊಸನಗರ ಆಸ್ಪತ್ರೆಗೆ ಕರೆದೊಯ್ದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. ರಕ್ತ ವಾಂತಿ ಜಾಸ್ತಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕುಟುಂಬಕ್ಕೆ ಇದ್ದ ಒಂದೇ ಆಸರೆ ಗಣೇಶ ಪೂಜಾರಿ ಮೃತರು, ಇಬ್ಬರು ಗಂಡು ಮಕ್ಕಳು, ವಯಸ್ಸಾದ ಮಾವ,ಪತ್ನಿಯನ್ನ  ಕುಟುಂಬವನ್ನ ಅಕಾಲಿಕವಾಗಿ ಅಗಲಿದ್ದು ಅತ್ಯಂತ ದುಃಖದ ಸಂಗತಿ ಆಗಿದೆ…!!ಯಾವಾಗಲು ಅತೀ ಹೆಚ್ಚು ಚಟುವಟಿಕೆಯಿಂದ ಎಲ್ಲ ಕೆಲಸ ಕಾರ್ಯಗಳಲ್ಲಿ, ಊರಿನವರ ಜೊತೆಗೆ ನಿಷ್ಕಲ್ಮಶವಾಗಿ ತನ್ನನ್ನ ತಾನುತೊಡಗಿಸಿಕೊಂಡಿದ್ದ ಗಣೇಶ ಪೂಜಾರಿ ನಿಧನಕ್ಕೆ ಬಡೇನಕೊಪ್ಪ ಗ್ರಾಮಸ್ಥರು ತೀವ್ರ ಸಂತಾಪವನ್ನ ವ್ಯಕ್ತಪಡಿಸಿದ್ದಾರೆ…

ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು,ಜನಪ್ರತಿನಿದಿಗಳು ಮೃತರ ಕುಟುಂಬಕ್ಕೆ ಪರಿಹಾರ ಹಾಗೂ ಸಾಂತ್ವನ ನೀಡಬೇಕು ಎಂಬುದು ಊರಿನ ಗ್ರಾಮಸ್ಥರು ಹಿತೈಷಿಗಳು, ಒತ್ತಾಯ ಮಾಡಿದ್ದಾರೆ.ಕುಟುಂಬ ಅತ್ಯಂತ ಕಡು ಬಡವರಾಗಿದ್ದು ಇಬ್ಬರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು ಕುಟುಂಬದ ಕೊಂಡಿ ಕಳಚಿದ್ದು ಅತೀ ಗಂಭೀರ ಸಮಸ್ಯೆ ಇದಾಗಿದ್ದು ತಕ್ಷಣವೇ ಸ್ಪಂದನೆ ನೀಡಿ ಎಂಬುದು ಗ್ರಾಮಸ್ಥರ ಆಗ್ರಹ.

ರೈತರಿಗೆ ಸರಿಯಾದ ಮಾಹಿತಿ ನೀಡದೇ,ಔಷಧಿಯನ್ನು ಮಾರಾಟ ಮಾಡುತ್ತಿರುವುದು ಖಂಡನೀಯ!. ಹಾಗಾಗಿ, ಪೊಲೀಸರು  ಈ ಬಗ್ಗೆ  ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸಲಿ ಎಂಬುದು ಸಾರ್ವಜನಿಕ ಬಂಧುಗಳ ಆಗ್ರಹ, ಹಾಗೂ ಇಷ್ಟೊಂದು ವಿಷ- ಪೂರಿತ ಪ್ರಕೃತಿ ವಿರೋಧಿ, ಮಣ್ಣಿನ ಸತ್ವ ಹಾಳು ಮಾಡುವ ಔಷದಿಗಳ ಮಾರಾಟ ಹಾಗೂ ಉತ್ಪಾದನೆಗೆ ಸರ್ಕಾರ ಕಡಿವಾಣ ಹಾಕಲೇಬೇಕು.ಇಲ್ಲದಿದ್ದರೆ ಮುಂದಿನ ಪೀಳಿಗೆಗೆ ಬೆಳೆದು ತಿನ್ನುವ ಈ ಭೂಮಿ ಸಂಪೂರ್ಣ ವಿಷಮಯ ವಾಗುದರಲ್ಲಿ ಅನುಮಾನವೆ ಇಲ್ಲಾ!!.

ಹೌದು ಈ ಹಿಂದೆ ಕೂಡ ಮೈಸೂರು ಜಿಲ್ಲೆಯಲ್ಲಿಯೂ ಸಹ ಲ್ಯಾನೆಟ್ ಔಷದಿ ಸಿಂಪಡಿಸಿ 70 ಹೆಚ್ಚು ರೈತರು ಆಸ್ವಸ್ಥರಾಗಿದ್ದು ಬೆಳೆಕಿಗೆ ಬಂದಿದ್ದು, ರೈತರಿಗೆ ಜಾಗೃತಿ ಮೂಡಿಸಬೇಕಿದೆ..

ಇಂಥವ ವಿಷಪೂರಿತ ಔಷದಿಗಳು ನಾವು ತಿನ್ನುವ ಆಹಾರ, ಹಣ್ಣು ಗಳಿಗೆ ಸಿಂಪಡಣೆ ಅತ್ಯಂತ ಅಪಾಯಕಾರಿ, ಹಾಗೂ ನಮ್ಮ ಭೂಮಿ ಈಗ ವಿಷವರ್ತೂಲದಲ್ಲಿ ಸಿಲುಕಿದ್ದು, ಅತ್ಯಂತ ದುರಂತವೆ ಸರಿ…

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

7 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

7 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

11 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

13 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

14 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

23 hours ago