POSTMAN NEWS

ನೈಜ ಸುದ್ದಿ ನೇರ ಬಿತ್ತರ..

Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು

Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು


ಹೊಸನಗರ : ತಾಲ್ಲೂಕಿನ ಜಯನಗರದ ಕಲ್ಲುಕೊಪ್ಪ ಗ್ರಾಮದಲ್ಲಿ ಮಹಿಳೆಯೊಬ್ಬರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.

ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲುಕೊಪ್ಪ ಗ್ರಾಮದಲ್ಲಿ ನಾಗರತ್ನ ಎಂಬುವವರು ವಾಸದ ಮನೆಯಿಂದ 300 ಮೀಟರ್ ದೂರದಲ್ಲಿ 6 ಅಡಿ ಸುತ್ತಳತೆಯ 20 ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದು ಅವರು ಮಾನಸಿಕ ಅಸ್ವಸ್ಥರಾಗಿದ್ದು ಬೇರೆ-ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಪ್ರಧವಾಗಿರಲಿಲ್ಲ ಎಂದು ಹೇಳಲಾಗಿದ್ದು, ಬುಧವಾರ ಬೆಳಗ್ಗೆ ಬಾವಿಗೆ ಬಿದ್ದಿದ್ದಾರೆ.


 ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ಫೋನ್ ಮಾಡಿದ ತಕ್ಷಣ ಶರವೇಗದಲ್ಲಿ ಆಗಮಿಸಿದ ಸಿಬ್ಬಂದಿಗಳು ಮಹಿಳೆಯನ್ನು ಪ್ರಾಣ ಉಳಿಸುವುದರಲ್ಲಿ ಯಶಸ್ವಿಯಾಗಿದ್ದು ಈಕೆಗೆ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳಾದ ಆನಂದಪ್ಪ ಎನ್, ರಾಜೇಶ್ ಕೆ.ಹೆಚ್, ಶಂಕರಪ್ಪಗೌಡ, ಮಂಜುನಾಥ ಬಿ, ರಮೀಜ್‌ರಾಜ್, ರಾಜಶೇಖರ್ ಇದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.