HOSANAGARA | ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ನೇಮಕ

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ.


ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಸಾಗರ ವಿಧಾನಸಭೆ ಕ್ಷೇತ್ರದ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಜಿ.ಬಿ. ಚಂದ್ರಮೌಳಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.


ಜಿ.ಬಿ. ಚಂದ್ರಮೌಳಿ ಅವರು ತಕ್ಷಣ ಹೊಸನಗರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ. ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ಸಿಗಲೆಂದು ಹಾರೈಸುತ್ತೇನೆ ಎಂದು ನೇಮಕಾತಿ ಆದೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.


ಚಂದ್ರಮೌಳಿ ಗೌಡರವರು ಕೋಡೂರು ಗ್ರಾಮ ಪಂಚಾಯತಿ ಸದಸ್ಯರಾಗಿ ಹಾಗೂ ಹೊಸನಗರ ತಾಲ್ಲೂಕು ಪಂಚಾಯತಿ ಸದಸ್ಯರಾಗಿ ಸಾಕಷ್ಟು ಜನಪರ ಕೆಲಸವನ್ನು ಮಾಡಿರುವುದರ ಜೊತೆಗೆ ಬಡವ ಹಾಗೂ ಮಧ್ಯಮ ವರ್ಗದವರಿಗೆ ಸಾಕಷ್ಟು ಕೆಲಸವನ್ನು ಮಾಡಿದವರಾಗಿದ್ದು ಬಡವರೆಂದರೆ ಸಾಕಷ್ಟು ಸಹಾಯ ಹಸ್ತ ನೀಡಿದವರಾಗಿದ್ದಾರೆ.

ಪತ್ನಿ ಜ್ಯೋತಿ ಚಂದ್ರಮೌಳಿ ಜಿಲ್ಲಾ ಪಂಚಾಯತಿ ಸದಸ್ಯೆಯಾಗಿ ಕೆಲಸ ಮಾಡಿರುವ ಅನುಭವ ಹೊಂದಿದವರಾಗಿದ್ದೂ ಇಬ್ಬರು ಬಡವರಿಗೆ ಸಹಾಯ ಹಸ್ತ ನೀಡುವುದರ ಜೊತೆಗೆ ಈಗ ಬ್ಲಾಕ್ ಸಮಿತಿಯ ಅಧ್ಯಕ್ಷರಾಗಿರುವುದರಿಂದ ಹೊಸನಗರ ತಾಲ್ಲೂಕಿನ ಜನರಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕೆಲಸ ಮಾಡಲಿದ್ದಾರೆ..

ನೂತನವಾಗಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಬಿ‌ ಜಿ ಚಂದ್ರಮೌಳಿ‌ ಗೌಡರವರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ , ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ , ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ,ಮುಖಂಡರಾದ ಈಶ್ವರಪ್ಪ ಗೌಡ, ಸಣ್ಣಕ್ಕಿ ಮಂಜು ,ಸೋಮಶೇಖರ್ ಲಾವಿಗೆರೆ , ಅಮೀರ್‌ ಹಂಜಾ ,ಧನಲಕ್ಷ್ಮಿ , ಗಣಪತಿ ಗವಟೂರು , ಆಸೀಫ಼್ ಭಾಷಾ ,ಮಧುಸೂಧನ್ , ರವೀಂದ್ರ ಕೆರೆಹಳ್ಳಿ ,ಜಿ ಆರ್ ಗೋಪಾಲಕೃಷ್ಣ, ರಮೇಶ್ ಫ್ಯಾನ್ಸಿ,ಶ್ರೀಧರ್, ಲೇಖನ ಚಂದ್ರನಾಯ್ಕ್ , ಸಾಜೀದಾ ಹನೀಫ಼್  ಹಾಗೂ ಇನ್ನಿತರರು ಶುಭಾಶಯಗಳನ್ನು ಕೋರಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

8 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

8 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

12 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

14 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

15 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago