ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಸಾಗರ ವಿಧಾನಸಭೆ ಕ್ಷೇತ್ರದ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಜಿ.ಬಿ. ಚಂದ್ರಮೌಳಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಜಿ.ಬಿ. ಚಂದ್ರಮೌಳಿ ಅವರು ತಕ್ಷಣ ಹೊಸನಗರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ. ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ಸಿಗಲೆಂದು ಹಾರೈಸುತ್ತೇನೆ ಎಂದು ನೇಮಕಾತಿ ಆದೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಚಂದ್ರಮೌಳಿ ಗೌಡರವರು ಕೋಡೂರು ಗ್ರಾಮ ಪಂಚಾಯತಿ ಸದಸ್ಯರಾಗಿ ಹಾಗೂ ಹೊಸನಗರ ತಾಲ್ಲೂಕು ಪಂಚಾಯತಿ ಸದಸ್ಯರಾಗಿ ಸಾಕಷ್ಟು ಜನಪರ ಕೆಲಸವನ್ನು ಮಾಡಿರುವುದರ ಜೊತೆಗೆ ಬಡವ ಹಾಗೂ ಮಧ್ಯಮ ವರ್ಗದವರಿಗೆ ಸಾಕಷ್ಟು ಕೆಲಸವನ್ನು ಮಾಡಿದವರಾಗಿದ್ದು ಬಡವರೆಂದರೆ ಸಾಕಷ್ಟು ಸಹಾಯ ಹಸ್ತ ನೀಡಿದವರಾಗಿದ್ದಾರೆ.
ಪತ್ನಿ ಜ್ಯೋತಿ ಚಂದ್ರಮೌಳಿ ಜಿಲ್ಲಾ ಪಂಚಾಯತಿ ಸದಸ್ಯೆಯಾಗಿ ಕೆಲಸ ಮಾಡಿರುವ ಅನುಭವ ಹೊಂದಿದವರಾಗಿದ್ದೂ ಇಬ್ಬರು ಬಡವರಿಗೆ ಸಹಾಯ ಹಸ್ತ ನೀಡುವುದರ ಜೊತೆಗೆ ಈಗ ಬ್ಲಾಕ್ ಸಮಿತಿಯ ಅಧ್ಯಕ್ಷರಾಗಿರುವುದರಿಂದ ಹೊಸನಗರ ತಾಲ್ಲೂಕಿನ ಜನರಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕೆಲಸ ಮಾಡಲಿದ್ದಾರೆ..
ನೂತನವಾಗಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಜಿ ಚಂದ್ರಮೌಳಿ ಗೌಡರವರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ , ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ , ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ,ಮುಖಂಡರಾದ ಈಶ್ವರಪ್ಪ ಗೌಡ, ಸಣ್ಣಕ್ಕಿ ಮಂಜು ,ಸೋಮಶೇಖರ್ ಲಾವಿಗೆರೆ , ಅಮೀರ್ ಹಂಜಾ ,ಧನಲಕ್ಷ್ಮಿ , ಗಣಪತಿ ಗವಟೂರು , ಆಸೀಫ಼್ ಭಾಷಾ ,ಮಧುಸೂಧನ್ , ರವೀಂದ್ರ ಕೆರೆಹಳ್ಳಿ ,ಜಿ ಆರ್ ಗೋಪಾಲಕೃಷ್ಣ, ರಮೇಶ್ ಫ್ಯಾನ್ಸಿ,ಶ್ರೀಧರ್, ಲೇಖನ ಚಂದ್ರನಾಯ್ಕ್ , ಸಾಜೀದಾ ಹನೀಫ಼್ ಹಾಗೂ ಇನ್ನಿತರರು ಶುಭಾಶಯಗಳನ್ನು ಕೋರಿದ್ದಾರೆ.