POSTMAN NEWS

ನೈಜ ಸುದ್ದಿ ನೇರ ಬಿತ್ತರ..

Hosanagara | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಕರಾಳ ದಿನಾಚರಣೆ

ಹೊಸನಗರ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಇ.ಡಿ ಇಲಾಖೆಯವರು ಬಂಧಿಸಿರುವುದನ್ನು ಖಂಡಿಸಿ ಇಲ್ಲಿನ ತಾಲ್ಲೂಕು ಕಛೇರಿಯ ಎದುರು ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆ ಆಚರಿಸಿದರು.


ನಂತರ ಮಾತನಾಡಿದ ಆಮ್‌ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ಗಣೇಶ ಸೊಗೋಡು, ಅರವಿಂದ್ ಕೇಜ್ರಿವಾಲ್ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಹೊರೆಸುತ್ತಿದ್ದಾರೆ ಅವರ ಆಡಳಿತ ವೈಖರಿ ಅವರ ಜನಪ್ರಿಯತೆ ಅವರು ದೆಹಲಿಯಲ್ಲಿ ನಡೆಸುತ್ತಿರುವ ಆಡಳಿತ ಜನಪರವಾದ ಕಾರ್ಯಕ್ರಮಗಳನ್ನು ಕಂಡು ಈ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಅವರನ್ನು ಜೈಲಿನಲ್ಲಿಟ್ಟರೇ ಅವರವರ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬ ಉದ್ದೇಶದಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಆಮ್‌ಆದ್ಮಿ ಜಿಲ್ಲಾಧ್ಯಕ್ಷ ಶಿವಕುಮಾರ್ ಗೌಡ, ಆಮ್‌ಆದ್ಮಿ ರೈತ ಘಟಕ ಜಿಲ್ಲಾ ಅಧ್ಯಕ್ಷ ಈಶ್ವರಪ್ಪ, ಜಿಲ್ಲಾ ಕಾರ್ಯದರ್ಶಿ ಹಸನಬ್ಬ, ಜಗದೀಶ್ ಬಿದರಹಳ್ಳಿ, ಗಣಪತಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.