Humcha| ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ
ರಿಪ್ಪನ್ಪೇಟೆ – ಇಲ್ಲಿನ ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಭೇಟಿ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಘೋಷಣೆ ಮಾಡಿರುವ ಈಶ್ವರಪ್ಪ (K.S Eshwarappa) ಅವರನ್ನು ಮನವೊಲಿಸಲು ಬಿಜೆಪಿ (BJP) ನಾಯಕರು ಕಸರತ್ತು ಮಾಡುತ್ತಿದ್ದಾರೆ ಆದರೆ ಈಶ್ವರಪ್ಪ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡುತಿದ್ದಾರೆ.
ಇಂದು ಹೊಸನಗರ ತಾಲೂಕಿನ ಹೊಂಬುಜ ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಅವರು ಹೊಂಬುಜ ಜೈನಮಠದ ಜಗದ್ಗುರು ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.
ಈಶ್ವರಪ್ಪ ನಮಗೆ ತಂದೆ ಸಮಾನ – ಬಿವೈಆರ್
ಮಾಜಿ ಸಚಿವ ಕೆಎಸ್ ಈಶ್ವರಪ್ಪ (Former Minister KS Eshwarappa) ಅವರ ನಡವಳಿಕೆಯಿಂದ ಪಕ್ಷಕ್ಕೆ ಮುಜುಗರನೂ ಆಯ್ತು. ಅವರಿಂದ ನಮಗೆ ತುಂಬಾ ನೋವು ಆಯ್ತು ಮಾದ್ಯಮಕ್ಕೆ ಶಿವಮೊಗ್ಗ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ (BJP Candidate BY Raghavendra) ಹೇಳಿಕೆ ನೀಡಿದ್ದಾರೆ.
ಕಳೆದ ಎರಡು ಮೂರು ಚುನಾವಣೆಗಳಲ್ಲಿ (Election) ಅವರ ಆಶೀರ್ವಾದಿಂದಲೇ ನಾನು ಸ್ಪರ್ಧೆ ಮಾಡಿದ್ದೆ. ಅವರು ನಮ್ಮ ತಂದೆಯವಂತೆ ಇರುವ ವ್ಯಕ್ತಿ. ಮುಂದೆ ನನಗೆ ಆಶೀರ್ವಾದ ಮಾಡುವ ವಿಶ್ವಾಸ ಇದೆ ಎಂದು ಹೇಳಿದರು. ಇನ್ನೂ ಎರಡು ಮೂರು ದಿನಗಳಲ್ಲಿ ನಮ್ಮ ವರಿಷ್ಠರು ಅವರ ಜೊತೆ ಮಾತಾಡ್ತಾರೆ ಎಂದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್