ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲ ಕೃಷ್ಣ ಬೇಳೂರು
ರಿಪ್ಪನ್‌ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಪಿಎಂಸಿ ಕಾಯ್ದಿಯನ್ನು ತಿದ್ದುಪಡಿಗೊಳಿಸುವ ಮೂಲಕ ರೈತರಿಗೆ ಹೆಚ್ಚು ಉಪಯುಕ್ತವಾದ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಪಟ್ಟಣದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಸುಸಜ್ಜಿತ ರಸ್ತೆ ಇನ್ನಿತರ ಮೂಲಭೂತ ಸೌಲಭ್ಯಗಳಿಗೆ ೨.೫೦ ಕೋಟಿ ವೆಚ್ಚದ ಅಭಿವೃಧ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ರಾಜ್ಯ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಯೊಂದಿಗೆ ಅಭಿವೃದ್ಧಿ ಕಾಮಗಾರಿಗೂ ಹೆಚ್ಚಿನ ಅನುಧಾನವನ್ನು ನೀಡುತ್ತಿದ್ದು ಅಭಿವೃದ್ಧಿಗೆ ಅನುಧಾನದ ಕೊರತೆಯಲ್ಲಿ ಈಗಾಗಲೇ ಕ್ಷೇತ್ರದ ವ್ಯಾಪ್ತಿಯಲ್ಲಿ ಈ ಹಿಂದಿನ ಸರ್ಕಾರದವರು ಅನುಧಾನವನ್ನು ನೀಡದೆ ಅರ್ಧಕ್ಕೆ ನಿಂತ ಹಲವು ಕಾಮಗಾರಿಗಳನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅನುಧಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕಾಂಗ್ರೆಸ್ ಸರ್ಕಾರ ಈ ಬಾರಿಯ ಬಜೆಟಿನಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದು ಹಾಗೆಯೇ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ನುಡಿದಂತೆ ನಡೆದ ಸರ್ಕಾರವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಹಣಕಾಸಿನ ಹಾಗೂ ಅನುದಾನದ ಕೊರತೆ ಇಲ್ಲ, ರಾಜ್ಯದ ಸರ್ವಾಂಗಿಣ ಅಭಿವೃದ್ಧಿಯೇ ಸರ್ಕಾರದ ಮೂಲ ಮಂತ್ರವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಎಪಿಎಂಸಿ ಮಾಜಿ ಅಧ್ಯಕ್ಷರು ,ಇನ್ನಿತರ ಪಕ್ಷದ ಮುಖಂಡರು ಹಾಗೂ ಎಪಿಎಂಸಿ ಅಧಿಕಾರಿಗಳು ಹಾಜರಿದ್ದರು.