Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಂದಾಸುರದಲ್ಲಿ ಟಿಪ್ಪರ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಅಂದಾಸುರದ ಶಿಲ್ಪ (40) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಮನೆಯ ಮುಂಭಾಗದ ನೀರಿನ ಟ್ಯಾಂಕ್ ನಿಂದ ನೀರು ತುಂಬಿಸಿಕೊಂಡು ಬರುತಿದ್ದಾಗ ಚಾಲಕನ ಅಜಾಗರೂಕತೆಯಿಂದ ಅತೀ ವೇಗದಿಂದ ವಾಹನ ಚಲಾಯಿಸಿಕೊಂಡು ಬಂದು ಮಹಿಳೆಗೆ ಡಿಕ್ಕಿಯಾಗಿದೆ.
ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಶಿಲ್ಪಳಿಗೆ ಡಿಕ್ಕಿಯಾದ ಟಿಪ್ಪರ್ ವಾಹನ 200 ಮೀಟರ್ ಅಷ್ಟು ದೂರ ಅವರ ದೇಹವನ್ನು ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ತಕ್ಷಣ ಸ್ಥಳೀಯರು ಶಿಲ್ಪ ರವರನ್ನು ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಶಿಲ್ಪರವರ ಪ್ರಾಣಪಕ್ಷಿ ಹಾರಿಹೋಗಿದೆ.
ಈ ಭಾಗದಲ್ಲಿ ಅಕ್ರಮ ಕಲ್ಲು ಕ್ವಾರಿ ಹಾಗೂ ಮರಳು ಮಾಫ಼ಿಯಾದ ಹಾವಳಿ ಹೆಚ್ಚಾಗಿದ್ದು ಯಮಸ್ವರೂಪಿ ಟಿಪ್ಪರ್ ಗಳು ಈ ಭಾಗದ ಜನರಲ್ಲಿ ಭೀತಿಯನ್ನುಂಟು ಮಾಡಿದೆ.ಈ ಬಗ್ಗೆ ಅನೇಕ ಹೋರಾಟಗಳು ಕೂಡಾ ನಡೆಯುತ್ತಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್