Ripponpete | ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು ಮಂಜುನಾಥ್

ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು


ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಮಾತು ಮಾತಿಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಗ್ಗೆ  ಹಗುರವಾಗಿ ಟೀಕಿಸುತ್ತಿದ್ದರೂ ಕೂಡಾ ಅದನ್ನು ಖಂಡಿಸದೇ ಇರುವ ಮಕ್ಕಳು ಬೇಕಾ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಹೇಳಿದರು.


ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಿಮ್ಮ ತಂದೆಯವರಿಗೆ ಹೀಗೆ ಯಾರಾದರೂ ಹೇಳಿದರೆ ಸುಮ್ಮನಿರುತ್ತೀರಾ ಎಂದು ಮಾಧ್ಯಮದವರನ್ನು ಕೇಳಿದ ಅವರು ಅಂತಹ ಜಾಯಾಮಾನ ನಮ್ಮದಲ್ಲ ಎಂದು ಹೇಳುತ್ತಾ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಮತ್ತು ಸಂಸದ ಬಿ.ವೈ.ರಾಘವೇಂದ್ರರಿಗೆ  ಅಪ್ಪನಿಗಿಂತ ಆಧಿಕಾರವೇ ಮುಖ್ಯ ಎನ್ನುವುದಕ್ಕೆ ಸಾಕ್ಷಿ ಬೇಕಾ ಎಂದು  ಹೇಳುವುದರೊಂದಿಗೆ ನಿತ್ಯ ಮಾಜಿ ಮುಖ್ಯಮಂತ್ರಿ ರಾಷ್ಟ್ರೀಯ ನಾಯಕ ಬಿ.ಎಸ್.ಯಡಿಯೂರಪ್ಪನವರ  ಜನ್ಮ ಜಾಲಾಡುತ್ತಿದ್ದರೂ ಕೂಡಾ ಮಕ್ಕಳಾದ ಈ ಇಬ್ಬರು ತುಟಿ ಬಿಚ್ಚದೇ ಇರುವುದು ಮತ್ತು ಪಕ್ಷದ ಯಾವ ಒಬ್ಬ ಕಾರ್ಯಕರ್ತರು ಮಾತಾಡದೇ ಮೌನ ವಹಿಸಿರುವುದರ ಬಗ್ಗೆ ತೀವ್ರ ಆಸಮದಾನ ವ್ಯಕ್ತಪಡಿಸಿದ ಅವರು ಟೀಕಿಸುವುದೇ ಗುರಿಯನ್ನಾಗಿಸಿಕೊಂಡಿರುವ ಈಶ್ವರಪ್ಪನವರಿಗೆ ಎಚ್ಚರಿಕೆಯನ್ನಾದರೂ ನೀಡಲು ಬಿಜೆಪಿ ಪಕ್ಷದ ಯಾವ ಒಬ್ಬ ನಾಯಕರು ಸಿದ್ದರಿಲ್ಲವೇ ಎಂದು ಕುಟುಕಿದರು.

ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ಮಹಿಳೆಯರ ಮತಗಳು ಕಾಂಗ್ರೆಸ್ ಪಕ್ಷದ ಕಡೆ ಹೆಚ್ಚು ಬರುತ್ತವೆ.ಯಾವುದೇ ಸಂಶಯವಿಲ್ಲ ಆದರೆ ಕೆಲವು ಕಡೆಯಲ್ಲಿ ಪುರುಷ ಮತದಾರರು ಮತ್ತು ಯುವ ಜನಾಂಗದವರ ಓಟುಗಳು ಮಾತ್ರ ಪಕ್ಷಕ್ಕೆ ಬರುತ್ತವೆಂಬುದರ ಬಗ್ಗೆ ಹೇಳುವುದು ಕಷ್ಟವಾಗಿದೆ.ಆದರೂ  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಒಂದು ಕುಟುಂಬಕ್ಕೆ ವರ್ಷಕ್ಕೆ 45 ರಿಂದ 50 ಸಾವಿರ ರೂ ಹಣ ಫಲಾನುಭವಿಗಳ ಕೈ ಸೇರುತ್ತಿದ್ದು ಈ ಭಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ವೈ.ಹೆಚ್.ನಾಗರಾಜ್, ಚಾಮರಾಜ್,  ರತೇಶ್ವರಪ್ಪಗೌಡ,ಬೃಂದಾವನ ಹೋಟಲ್ ಮಾಲೀಕ ಸ್ವಾಮಿರಾವ್,ರಾಜು ಟೈಲರ್,ಕರಿಬಸಪ್ಪ ಬೆಳಂದೂರು,ಸಿದ್ದುಭಂಡಾರಿ  ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

5 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

5 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

9 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

11 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

12 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

21 hours ago