ರಿಪ್ಪನ್‌ಪೇಟೆ;- ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಮಾರ್ಚಿ ೮ ಮತ್ತು ೯ ರಂದು ಮಹಾಶಿವರಾತ್ರಿಯ ಅಂಗವಾರಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚಿ 08 ರಂದು ಶುಕ್ರವಾರ ಹಂದಲಸೆ ರಾಘವೇಂದ್ರ ಭಟ್ರು ಮತ್ತು ಪುರೋಹಿತತ್ವದಲ್ಲಿ ಮಹಾಶಿವರಾತ್ರಿಯ ಬೆಳಗ್ಗೆ ೧೦ ಗಂಟೆಯಿAದ ಶ್ರೀ ಶಂಕರೇಶ್ವರ ಸ್ವಾಮಿಗೆ ರುದ್ರಾಭಿಷೇಕ.ಕುಂಭಾಭಿಷೇಕ.ರಾತ್ರಿ ೯ ಗಂಟೆಗೆ ಕೃಷ್ಣಮೂರ್ತಿ ಭಟ್ಟರು ಶಾಂತಪುರ ಇವರ ನೇತೃತ್ವದಲ್ಲಿ ರುದ್ರಾಭಿಷೇಕ ಹಾಗೂ ರಾತ್ರಿ ೧೦ ಗಂಟೆಗೆ ಕೆ.ಆರ್.ಪುರಂ ಬೆಂಗಳೂರು ವಾಗ್ವೇವಿ ನೃತ್ಯಾಲಯ ಭರತನಾಟ್ಯ ಮತ್ತು ಜಾಗರಣೆಯ ಅಂಗವಾಗಿ ಅಲಸೆ ಮತ್ತು ಮಹಾಗಣಪತಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಹಿತ್ತಲಗದ್ದೆ ಕಿಲಾರ ಇವರ ಸಂಯೋಜನೆಯಲ್ಲಿ `ದಕ್ಷಿಯಕ್ಞ ಕೃಷ್ಣಲೀಲೆ ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗಿದೆ.
ಮಾರ್ಚಿ ೯ ರಂದು ಶನಿವಾರ ಬೆಳಗ್ಗೆ ೧೦ ಗಂಟೆಗೆ ಶ್ರೀನಾಗಭೂಷಣ ಭಟ್ರು ಶ್ರೀಕಾಂತ ಭಟ್ಟು ಇವರಿಂದ ಸಾಮೂಹಿಕ ಸತ್ಯನಾರಾಯಣಪೂಜೆ ಮತ್ತು ಮಹಾಮಂಗಳಾರತಿ ಪ್ರಸಾದ ವಿನಿಯೋಗ ಹಾಗೂ ಸಾಮೂಹಿಕ ಅನ್ನಸಂತರ್ಪಣೆ ಜರುಗಲಿದೆ ಎಂದು ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್