Ripponpete | ನನ್ನ ರಕ್ತದ ಕಣಕಣದಲ್ಲಿಯೂ ಕೇಸರಿ ಇದೆ – ಕೆ.ಎಸ್.ಈಶ್ವರಪ್ಪ

ನನ್ನ ರಕ್ತದ ಕಣಕಣದಲ್ಲಿಯೂ  ಕೇಸರಿ ತುಂಬಿದೆ. ಕೆ.ಎಸ್.ಈಶ್ವರಪ್ಪ

ರಿಪ್ಪನ್‌ಪೇಟೆ;-ನನ್ನ ರಕ್ತದ ಕಣಕಣದಲ್ಲಿಯೂ ಮೋದಿಜೀ ಬಿಜೆಪಿಯ ಹಿಂದುತ್ವವೇ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಇಂದು ಗುಳುಗುಳಿ ಶಂಕರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಶಂಕೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರದ ಕುರಿತು ಕಾರ್ಯಕರ್ತ ಅಭಿಮಾನಿಗಳನ್ನು ಭೇಟಿ ಮಾಡಲು ರಿಪ್ಪನಪೇಟೆಗೆ ಅಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಧಿಕಾರಕ್ಕಾಗಿ ಪಕ್ಷ ತೊರೆದು ಹೋದ ವ್ಯಕ್ತಿ ಅದರೆ ನನಗೆ ಪಕ್ಷವೇ ಹೆತ್ತ ತಾಯಿಯಂತೆ ನಾನು ಪಕ್ಷವನ್ನು ತೊರೆಯುವುದಿಲ್ಲ ಎಂದು ಹೇಳಿ ಅಯನೂರು ಮಂಜುನಾಥ ಮತ್ತು ಆರ್.ಕೆ.ಸಿದ್ದರಾಮಣ್ಣನವರ ಚಿಲ್ಲರೆ ಪ್ರಶ್ನೆಗಳಿಗೆ ಉತ್ತರಿಸುವ ಗೊಜಿಗೆ ಹೋಗುವುದಿಲ್ಲ  ಎಂದರು.ನಾನು ಪಕ್ಷದಲ್ಲಿ ಹಿರಿಯ ರಾಜಕಾರಣಿಯಾಗಿದ್ದು ಕೆಳಹಂತದ ಎಲ್ಲ ಕಾರ್ಯಕರ್ತರ ಸಂಪರ್ಕವೂ ನನಗಿದೆ ಈಗಾಗಲೇ ಅಂತರಿಕವಾಗಿ ನನಗೆ ಬೆಂಬಲಿಸುತ್ತಿದ್ದು ಚುನಾವಣಾ ಪ್ರಕ್ರಿಯೆ ನಂತರದಲ್ಲಿ ಬಹಿರಂಗವಾಗಿ ಬಿಜೆಪಿಯಿಂದ ಬಂಡೇದ್ದು  ನನ್ನೊಂದಿಗೆ ಸೇರ್ಪಡೆಗೊಳ್ಳಲಿದ್ದಾರೆಂದರು.

ಶೀಘ್ರದಲ್ಲಿಯೇ ಕಾರ್ಯಕರ್ತರ ನೇರ ಸಂಪರ್ಕಕ್ಕೆ ಅನುಕೂಲವಾಗುವಂತೆ ಚುನಾವಣಾ ಪ್ರಚಾರ ಕಛೇರಿಯನ್ನು ರಿಪ್ಪನ್‌ಪೇಟೆಯಲ್ಲಿ   ಪ್ರಾರಂಭಿಸಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಬಿಜೆಪಿ ಜಿಲ್ಲಾ ಮುಖಂಡರಾದ ಆರ್.ಟಿ.ಗೋಪಾಲ,ತಮ.ನರಸಿಂಹ,ತರಕಾರಿ ಯೋಗೇಂದ್ರಗೌಡ, ನಿರೂಪ್.ಪವನ್‌ ಶೆಟ್ಟಿ,ಕೆ.ಗಣೇಶ್‌ಪ್ರಸಾದ್,ಇನ್ನಿತರ ಮುಖಂಡರು ಇದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

3 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

6 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

7 hours ago

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ Private bus loses control and…

7 hours ago

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ – 19 ವರ್ಷದ ಯುವಕ ಸ್ಥಳದಲ್ಲೇ ಸಾವು

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ - 19 ವರ್ಷದ ಯುವಕ ಸ್ಥಳದಲ್ಲೇ ಸಾವು 19-year-old Arjun…

9 hours ago

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

1 day ago