Headlines

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದ ಘಟನೆಯ ಬಗ್ಗೆ ಗುತ್ತಿಗೆದಾರ ಉದಯ್ ಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಕಗ್ಗಲಿಜೆಡ್ಡು ಗ್ರಾಮದಲ್ಲಿ ಸೇತುವೆ ಕಾಮಗಾರಿ ನಡೆಸುತಿದ್ದಾಗ ಆಕಸ್ಮಿಕವಾಗಿ ಸೆಂಟ್ರಿಂಗ್ ವಾಲಿದ್ದು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ ಎಂದರು.

ಸೇತುವೆ ಕಾಮಗಾರಿ ವೇಳೆಯಲ್ಲಿ ಕಾರ್ಮಿಕರಿಗೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರಿಂದ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಹಾಗೇಯೆ ನಮ್ಮ ಕಾರ್ಮಿಕರಿಗೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಅಗತ್ಯವಾಗಿ ಬೇಕಾದ ಬೆಲ್ಟ್ ,ಹೆಲ್ಮೇಟ್ ಹಾಗೂ ಪ್ರಥಮ ಚಿಕಿತ್ಸಾ ಕಿಟ್ ಗಳನ್ನು ಪೂರೈಸಲಾಗುತ್ತದೆ ಎಂದರು.

ಕಾಮಗಾರಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕಾರ್ಮಿಕರಿಗೆ ಪಿಎಫ಼್ ಹಾಗೂ ಕಾರ್ಮಿಕರ ಕಾರ್ಡ್‌ನ್ನು ನೀಡಲಾಗಿದ್ದು ಸರ್ಕಾರದ ನಿಯಾಮವಳಿಗಳ ಪ್ರಕಾರ ಕಾರ್ಯನಿರ್ವಹಿಸುತಿದ್ದೇವೆ ಎಂದರು.

ಇನ್ನೂ ಕೆಲವೇ ದಿನಗಳಲ್ಲಿ ಕಗ್ಗಲಿಜೆಡ್ಡು ಗ್ರಾಮದ ಜನರ ಬಹುದಿನಗಳ ಬೇಡಿಕೆಯಾದ ಸೇತುವೆಯ ಕಾಮಗಾರಿಯನ್ನು ಪೂರ್ಣಗೊಳಿಸಲಿದ್ದೇವೆ ಎಂದು ಈ ಸಂಧರ್ಭದಲ್ಲಿ ಹೇಳಿದರು.

Leave a Reply

Your email address will not be published. Required fields are marked *

Exit mobile version