Shivamogga | ಮೋದಿ ಸಮಾವೇಶದಲ್ಲಿ ಕುಮಾರ್ ಬಂಗಾರಪ್ಪ ಪ್ರತ್ಯಕ್ಷ , ಕೆ ಎಸ್ ಈಶ್ವರಪ್ಪ ಗೈರು
ಶಿವಮೊಗ್ಗ : ನಗರದ ಫ್ರೀಡಂ ಪಾರ್ಕಿನಲ್ಲಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯುತ್ತಿದ್ದು ಈ ಕಾರ್ಯಕ್ರಮದಲ್ಲಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಿಜೆಪಿಯ ಹಿರಿಯ ಮುಖಂಡ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅನುಪಸ್ಥಿತಿ ಎದ್ದು ಕಾಣುತ್ತಿದೆ.
ಈ ನಡುವೆ ಬಿಜೆಪಿಯಿಯ ಹಲವು ಕಾರ್ಯಕ್ರಮಗಳಲ್ಲಿ ದೂರ ಉಳಿದಿದ್ದ ಇನ್ನೇನು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು ಎಂದು ಹಲವು ಕಡೆ ಸುದ್ದಿಯಾಗಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಹಿರಿಯ ಪುತ್ರ ಕುಮಾರ್ ಬಂಗಾರಪ್ಪ ಇಂದು ಮೋದಿ ಕಾರ್ಯಕ್ರಮಕ್ಕೆ ಎಂಟ್ರಿ ನೀಡಿದ್ದು ಹಲವು ಗೊಂದಲಕ್ಕೆ ತೆರೆ ಎಳೆದಂತೆ ಆಗಿದೆ..
ಕಾರ್ಯಕ್ರಮಕ್ಕೆ ಕುಮಾರ್ ಬಂಗಾರಪ್ಪ ಬಂದ ತಕ್ಷಣ ಜನರಲ್ಲಿ ಹರ್ಷೋದ್ಗಾರ ಎದ್ದು ಕಾಣುತ್ತಿತ್ತು ಈ ನಡುವೆ ಆತ್ಮಿಯವಾಗಿ ಕುಮಾರ್ ಬಂಗಾರಪ್ಪನ ಬರಮಾಡಿಕೊಂಡ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಮಾಜಿ ಸಂಸದ ರಾಘವೇಂದ್ರ ಆತ್ಮೀಯವಾಗಿ ಅಪ್ಪಿಕೊಂಡು ಬರಮಾಡಿಕೊಂಡರು.
ಒಟ್ಟಿನಲ್ಲಿ ಕುಮಾರ್ ಬಂಗಾರಪ್ಪ ಎಂಟ್ರಿಯಿಂದ ಕುಮಾರ್ ಬಂಗಾರಪ್ಪ ಮತ್ತು ಬಿಜೆಪಿ ನಡುವೆ ಉಂಟಾಗಿದ್ದ ದೊಡ್ಡ ಗ್ಯಾಪ್ ಒಂದು ಸರಿಯಾದಂತೆ ಕಾಣುತ್ತಿದ್ದು ಕುಮಾರ್ ಬಂಗಾರಪ್ಪ ಎಂಟ್ರಿ ಬಿಜೆಪಿಯಲ್ಲಿ ಮತ್ತೆ ಹೊಸ ಉತ್ಸಹ ಮೂಡಿಸಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್