ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು
ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ.
ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ.
ಈಕೆ ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿತ್ತು.
ಉಮ್ಮೆ ಕೊಲ್ಸುಂ ರಸ್ತೆ ದಾಟುವ ವೇಳೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.