ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು
ತೀರ್ಥಹಳ್ಳಿ : ನಕ್ಸಲ್ ಹೋರಾಟದ ಕೇಸ್ ಗಳ ತನಿಖೆಯನ್ನು ಚುರುಕುಗೊಳಿಸಿರುವ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ.
ವಶಕ್ಕೆ ಪಡೆದಿರುವ ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿಯನ್ನು ಪೊಲೀಸರು ಮಾ.04 ರಂದು ಬೆಳಿಗ್ಗೆ 10.30ಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ʼಬಾಡಿ ವಾರೆಂಟ್ʼ ಮೇಲೆ ತೀರ್ಥಹಳ್ಳಿಗೆ ಕರೆತಂದಿರುವ ಪೊಲೀಸರು ಆಗುಂಬೆ ಪೊಲೀಸ್ ಠಾಣೆ ಕೇಸ್ ಸಂಬಂಧ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂದು ಹೇಳಲಾಗಿದೆ.
ಶ್ರೀಮತಿಯನ್ನು ಪೊಲೀಸರು ಹೆಚ್ಚಿನ ಭದ್ರತೆಯಲ್ಲಿ ಕೇರಳದಿಂದ ಶಿವಮೊಗ್ಗ ಜೈಲಿಗೆ ಕರೆ ತಂದಿದ್ದಾರೆ. ನಕ್ಸಲ್ ಹೋರಾಟದಲ್ಲಿ ಬಿ.ಜಿ. ಕೃಷ್ಣಮೂರ್ತಿ ಜೊತೆ ಶೃಂಗೇರಿಯ ಶ್ರೀಮತಿ ಗುರುತಿಸಿಕೊಂಡಿದ್ದರು. 2023 ನವೆಂಬರ್ 7 ರಂದು ಶ್ರೀಮತಿಯನ್ನು ಕೇರಳ ಪೊಲೀಸರು ಬಂಧಿಸಿದ್ದರು. ಶ್ರೀಮತಿಯವರನ್ನು ವಿಚಾರಣೆ ಬಳಿಕ ತ್ರಿಶೂರ್ ಜೈಲಿನಲ್ಲಿ ಇರಿಸಿದ್ದರು ಎಂದು ಎನ್ನಲಾಗಿದೆ.
ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿರನ್ನು ಕಳೆದ ತಿಂಗಳು ಕೋರ್ಟ್ ಗೆ ಹಾಜರುಪಡಿಸಿದ್ದ ತೀರ್ಥಹಳ್ಳಿ ಪೊಲೀಸರು ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ಇಂದು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್