w
Headlines
Home » ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ |Crime News

ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ |Crime News

ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ | Crime News


SaGara | ಮನೆಯ ಟೆರೇಸ್‌ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರು ನಗರದಲ್ಲಿ ನಡೆದಿದೆ.

ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ.

ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಸಿರ್ಸಿಗೆ ಹೋಗಬೇಕಾಗಿತ್ತು.ಉದ್ಯೋಗ ಅರಸಿಕೊಂಡು ಸಿರ್ಸಿಗೆ ಹೋಗಲಾಗದೆ, ಸ್ಥಳೀಯವಾಗಿ ಯಾವುದೇ ಉದ್ಯೋಗವಿಲ್ಲದೆ ಜೀವನದಲ್ಲಿ ಜುಗುಪ್ಸೆಗೊಂಡು ತನ್ನ ಸಂಬಂಧಿಕರ ಮನೆಯ ಟೆರೇಸ್ ಮೇಲಿನ ಸಿಂಟೆಕ್ಸ್ಕ ಸ್ಟ್ಯಾಂಡಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಟೆರೇಸ್ ಮೇಲೆ ಮೃತದೇಹ ಕಂಡು ಗಾಬರಿಗೊಂಡ ಸಂಬಂಧಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಸಾಗರಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.