ಜಗತ್ತಿನಾದ್ಯಂತ ಏಕಕಾಲದಲ್ಲಿ ಫೇಸ್ಬುಕ್, ಇನ್ಸ್ಟಾಗ್ರಾಂ ಸರ್ವರ್ ಡೌನ್
ಸಾಮಾಜಿಕ ಮಾಧ್ಯಮ ದೈತ್ಯ ಫೇಸ್ಬುಕ್ ಭಾರತ ಸೇರಿ ವಿಶ್ವದ್ಯಾಂತ ಸರ್ವರ್ ಡೌನ್ ಆಗಿದ್ದು, ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ.
ಪ್ರಪಂಚದಾದ್ಯಂತದ ಬಳಕೆದಾರರು ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್ ಮಾಡುವಲ್ಲಿ ಮತ್ತು ಪ್ರವೇಶಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ.
ಜಗತಿನಾದ್ಯಂತ ಸುಮಾರು 200ಕೋಟಿಗೂ ಅಧಿಕ ಫೇಸ್ಬುಕ್ ಬಳಕೆದಾರರಿದ್ದು, ಇಷ್ಟು ಪ್ರಸಿದ್ಧಿ ಪಡೆದುಕೊಂಡಿರುವ ಆಯಪ್ಗಳು ದಿಢೀರ್ ಸ್ಥಗಿತಗೊಳ್ಳಲು ಕಾರಣವೇನು ಎಂಬುದು ಈವರೆಗೆ ಬಹಿರಂಗವಾಗಿಲ್ಲ. ಏಕಾಏಕಿ ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಂ ಏಕಾಏಕಿ ತನ್ನಷ್ಟಕ್ಕೆ ತಾನೇ ಲಾಗೌಟ್ ಆಗಿವೆ. ಇದರಿಂದ ಬಳಕೆದಾರರು ಕಂಗಲಾಗಿದ್ದಾರೆ.
ಏಕಾಏಕಿ ಖಾತೆಗಳು ಲಾಗೌಟ್ ಆಗಿರುವುದು ಏಕೆ ಎನ್ನುವುದು ಬಳಕೆದಾರರ ಪ್ರಶ್ನೆಯಾಗಿದೆ. ತನ್ನಷ್ಟಕ್ಕೆ ತಾನೇ ಲಗೌಟ್ ಆಗಿದ್ದರಿಂದ ಪಾಸ್ವರ್ಡ್ ಮರೆತವರು ಮತ್ತು ಬೇರೆಯವರ ಕಡೆಯಿಂದ ಫೇಸ್ಬುಕ್ ಖಾತೆ ಸೃಷ್ಟಿಸಿಕೊಂಡವರಿಗೆ ಮತ್ತೆ ಲಾಗಿನ್ ಆಗುವುದು ಹೇಗೆ ಎನ್ನುವ ಚಿಂತೆ ಕಾಡತೊಡಗಿದೆ.