ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!???|Crime News

ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!???


ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಸೋಮವಾರ ಮಧ್ಯಾಹ್ನ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಹುಂಚ ಹೊಸನಗರ ಮಾರ್ಗದಲ್ಲಿರುವ ಮುತ್ತಿನಕೆರೆಯಲ್ಲಿ ಸುಮಾರು 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಶವ ಕೆರೆಯಲ್ಲಿ ಕಂಡುಬಂದಿದ್ದು , ಮೃತದೇಹವನ್ನು ಹಗ್ಗದಿಂದ ಕಟ್ಟಲಾಗಿದೆ ಎನ್ನಲಾಗುತಿದ್ದು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ.


ವಿಷಯ ತಿಳಿಯುತ್ತಿದ್ದಂತೆ ಕೆರೆಯ ಸುತ್ತಮುತ್ತ ನೂರಾರು ಜನರು ಜಮಾಯಿಸಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *