ಈಜಲು ತೆರಳಿದ ಐಟಿಐ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು | ITI student drowned while going for swimming
ಹೊಳೆಹೊನ್ನೂರು : ಇಲ್ಲಿನ ಸಮೀಪದ ಶ್ರೀ ಕ್ಷೇತ್ರ ಕೂಡಲಿ ಗ್ರಾಮದ ತುಂಗಭದ್ರಾ ಸಂಗಮದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಶಿವಮೊಗ್ಗ ನಗರದ ಅಣ್ಣಾನಗರದ ಸಮಿವುಲ್ಲಾ ಹಾಗೂ ತಸ್ಮಿಯಾ ಬಾನು ಇವರ ಪುತ್ರ ಮುಬಾರಕ್ (18) ಎಂದು ಗುರುತಿಸಲಾಗಿದೆ.
ಯುವಕ ಹೊಳೆಹೊನ್ನೂರು ಪಟ್ಟಣದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರತಿನಿತ್ಯ ಶಿವಮೊಗ್ಗ ದಿಂದ ಪಟ್ಟಣದ ಕಾಲೇಜಿ ವ್ಯಾಸಂಗಕ್ಕೆ ಬರುತ್ತಿದ್ದನು. ಎಂದಿನಂತೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಕೂಡಲಿ ಸಂಗಮದಲ್ಲಿ ಸ್ನಾನ ಮಾಡಲು ಸ್ನೇಹಿತರೊಂದಿಗೆ ತೆರಳಿದ್ದಾನೆ.
ಪ್ರಕರಣ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

