ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ – Ambedkarjayanthi

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ



ಬಂಕಾಪುರ : ಎಲ್ಲ ಧರ್ಮ, ಜಾತಿಗಳಿಗೆ ಸಮಾನತೆ, ಸಮಾನ ಅವಕಾಶ ನೀಡಿದ ಸಂವಿಧಾನ ಕರ್ತೃ ಭಾರತರತ್ನ ಡಾ| ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆಯದೇ ಅವರ ಬದುಕು, ಆದರ್ಶ, ತತ್ವಗಳ ಗಂಭೀರ ಚಿಂತನೆಗಳ ಚರ್ಚೆಗೆ ವೇದಿಕೆಯಾಗಬೇಕು ಎಂದು ಕರ್ನಾಟಕ ಗಡಿನಾಡು ನಿಗಮದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ರವರು ಹೇಳಿದರು.

ಬಂಕಾಪುರ ಪಟ್ಟಣದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ  ಜಿಲ್ಲಾ ಸಮಿತಿ ಕಾರ್ಯಾಧ್ಯಕ್ಷ ಬಸವರಾಜ್ ಕಟ್ಟಿಮನಿ ನಿವಾಸದಲ್ಲಿ ಆಯೋಜಿಸಿದ್ದ ಡಾ| ಬಾಬಾಸಾಹೇಬ ಅಂಬೇಡ್ಕರ್‌ 133ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ನಂತರ ಮಾತನಾಡಿದ ಅವರು ಬಡತನದಲ್ಲಿ ಜನಿಸಿ ಹಲವು ನೋವುಗಳ ಮಧ್ಯೆ ತಮ್ಮ ವಿದ್ಯಾಬ್ಯಾಸ ಪಡೆದ ಅಂಬೇಡ್ಕರ್‌ ಜಗತ್ತಿನ ಹಲವು ದೇಶಗಳ ಸಂವಿಧಾನ ಅಧ್ಯಯನ ಮಾಡಿ ಅಮೆರಿಕ, ಇಂಗ್ಲೆಂಡ್‌, ಐರ್ಲೆಂಡ್‌ ದೇಶದ ಪ್ರಮುಖ ಅಂಶ ತೆಗೆದುಕೊಂಡು ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತ ಸಂವಿಧಾನವನ್ನು ನಮ್ಮ ದೇಶಕ್ಕೆ ಸಮರ್ಪಣೆ ಮಾಡಿದ ಕೀರ್ತಿ ಇದೆ ಎಂದರು.


ಅಂಬೇಡ್ಕರ್ ಈ ಹಿಂದೆ ದಲಿತರ ಕೇರಿಯಲ್ಲಿ ದೀಪವನ್ನು ಹಚ್ಚಿದ್ದೇನೆ ಅದನ್ನು ಉಳಿಸಿಕೊಂಡು ಹೋಗಿ ಅಂದಿದ್ದರು ಆ ದೀಪವನ್ನು ಬಸವರಾಜ್ ಕಟ್ಟಿಮನಿ ಮೂಲಕ ನಾವು ಕಂಡುಕೊಳ್ಳುತಿದ್ದೇವೆ ಎಂದರು.

ಕಾಂಗ್ರೆಸ್ ಮುಖಂಡರಾದ ಶಿಗ್ಗಾವ್ ಸವಣೂರು ಕ್ಷೇತ್ರದ ಯಾಸಿರ್ ಖಾನ್ ಪಠಾಣ್ ಮಾತನಾಡಿ ವ್ಯವಸ್ಥಿತ ಸಂವಿಧಾನವನ್ನು ದೇಶಕ್ಕೆ ನೀಡಿದ ಮಹಾನ್‌ ನಾಯಕ ಅಂಬೇಡ್ಕರ್‌. ಇಂದು ಸಮಾಜದಲ್ಲಿ ಅಂಬೇಡ್ಕರ್‌ ವೇಷಧಾರಿಗಳು ಕಾಣಸಿಗುತ್ತಾರೆಯೇ ಹೊರತು, ಅವರಂತೆ ನಡೆದುಕೊಳ್ಳುವವರು ಕಡಿಮೆ. ದೇಶ, ಸಮಾಜ ಮತ್ತು ತನ್ನವರಿಗಾಗಿ ಬಾಬಾಸಾಹೇಬರು ಬಾಳಿದಂತೆ ಬಾಳು ನಡೆಸ ಬೇಕಾದವರು ಬೇಕಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರದ ಮುಂದೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಕೇಕ್ ಅನ್ನು ಕತ್ತರಿಸಿ ಎಲ್ಲರಿಗೂ ಸಿಹಿ ಹಂಚಲಾಯಿತು.

ಕಾರ್ಯಕ್ರಮದಲ್ಲಿ ತಮಿದ್ ಕಾಜಿ ಸ್ವಾಗತಿಸಿದರು. ಜಿಲ್ಲಾ ದಲಿತ ಸಂಘರ್ಷ ಸಮಿತಿ ಕಾರ್ಯಾಧ್ಯಕ್ಷರಾದ ಬಸವರಾಜ್ ಕಟ್ಟಿಮನಿ ವಂದನಾರ್ಪಣೆಯನ್ನು ನೆರವೇರಿಸಿದರು

ಕಾರ್ಯಕ್ರಮದಲ್ಲಿ ಬಂಕಾಪುರದ ಪುರಸಭೆ ಸದಸ್ಯರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

2 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago